ದೊಡ್ಡಬಳ್ಳಾಪುರ (Doddaballapura): ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಹಮಾಮ್ ಸಮೀಪದ ಖಾಸಗಿ ಲೇಔಟ್ ನಲ್ಲಿ ಜೂಜಾಟದಲ್ಲಿ ತೊಡಗಿದ್ದ ವೇಳೆ ದಾಳಿ ನಡೆಸಿರುವ ಪೊಲೀಸರು, 8 ಮಂದಿಯನ್ನು ಬಂಧಿಸಿ, 3100 ರೂ ವಶ ಪಡಿಸಿಕೊಂಡಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.