ದೊಡ್ಡಬಳ್ಳಾಪುರ (Doddaballapura): ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಮೊಗಚಿ ಬಿದ್ದು ಹಲವರು ಗಾಯಗೊಂಡಿರುವ ಘಟನೆ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಶಿರಾದ ಗಿಡ್ಡನಹಳ್ಳಿಯಿಂದ ಯಲಹಂಕ ನಡೆಯುತ್ತಿರುವ ನಾಮಕರಣ ಕಾರ್ಯಕ್ರಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲವಾಗಿದ್ದು, ಒಂದು ಮಗು ಸೇರಿ ಹಲವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿ ಕೀರ್ತಿ ಮಹೇಶ್ ತಿಳಿಸಿದ್ದಾರೆ.
ಬಸ್ಸಿನಲ್ಲಿದ್ದವರನ್ನು ಹೊರತೆಯಲಾಗುತ್ತಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸರು ಮತ್ತು ಅಂಬುಲೆನ್ಸ್ ಸಿಬ್ಬಂದಿಗಳು ದೌಡಾಯಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ.