ಬೆಂಗಳೂರು; ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಕೊಲೆ ಮಾಡಿ (Murder) ಪರಾರಿಯಾಗಿದ್ದಾರೆ.
ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ.
ಶನಿವಾರ ರಾತ್ರಿ ಹೈದರ್ ಅಲಿ ಲೈವ್ ಬ್ಯಾಂಡ್ ಕಾರ್ಯಕವೊಂದನ್ನು ಮುಗಿಸಿಕೊಂಡು ಸ್ನೇಹಿತನ ಜೊತೆಗೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡ ಹೈದರ್ ಅಲಿಯ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಅಶೋಕ ನಗರ ಠಾಣೆ ಪೊಲೀಸರು ಗಾಯದ ಮಡುವಲ್ಲಿ ಬಿದ್ದ ಹೈದರ್ ಅಲಿಯನ್ನು ಕೂಡಲೆ ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದ ಹೈದರ್ ಅಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸ್ಥಳದಲ್ಲಿದ್ದ ಅಶೋಕನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.
ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆಂದು ವರದಿಯಾಗಿದೆ.