ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan kalyan) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಹೈದ್ರಾಬಾದ್ ನ ಅಪೋಲೋ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.
ಅವರಿಗೆ ನುರಿತ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ ಪವನ್ ಕಲ್ಯಾಣ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ಸಯಾಟಿಕಾದಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎನ್ನಲಾಗಿದೆ.
ಪವನ್ ಕಲ್ಯಾಣ್ ಗೆ ರಕ್ತ ಪರೀಕ್ಷೆ ಸ್ಕ್ಯಾನ್ ಮತ್ತು ಸಂಬಂಧಿತ ಪರೀಕ್ಷೆಗಳನ್ನು ನಡೆಸಲಾಗಿದೆ. ವರದಿಗಳನ್ನು ಪರಿಶೀಲಿಸಿದ ವೈದ್ಯರು ಕೆಲಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ. ಅಲ್ಲದೆ ಹೆಚ್ಚಿನ ಪರೀಕ್ಷೆಗಳು ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.
ಪವನ್ ಕಲ್ಯಾಣ್ ಅಭಿಮಾನಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ತೀವ್ರ ಒತ್ತಡದಿಂದಾಗಿಯೇ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂಬ ಚರ್ಚೆ ಜೋರಾಗಿದೆ.
ಪವನ್ ಕಲ್ಯಾಣ್ ಅವರು ಹಲವು ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಹಾಗೂ ಪವನ್ ಕಲ್ಯಾಣ್ ಇವತ್ತಿನಿಂದ ಪ್ರಾರಂಭವಾಗುವ ಬಜೆಟ್ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.