ದೊಡ್ಡಬಳ್ಳಾಪುರ (Doddaballapura) ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗುಂಡಮಗೆರೆ – ನೆಲ್ಲುಕುಂಟೆ ಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ.
ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ನೆಲ್ಲುಕುಂಟೆ ಗ್ರಾಮದ ಆನಂದ (38 ವರ್ಷ) ಗಂಭೀರವಾಗಿ ಗಾಯಗೊಂಡಿದ್ದು, ಮತ್ತೋರ್ವ ಸವಾರ ಶಿವರಾಜು ಎನ್ನುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ .
ಇಂದು ಒಂದೇ ದಿನ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೂರು ಅಪಘಾತಗಳು ಸಂಭವಿಸಿ, ಓರ್ವ ಸಾವನಪ್ಪಿದ್ದರೆ, ಹಲವಾರು ಗಾಯಗೊಂಡಿದ್ದಾರೆ.
ನಿನ್ನೆ ನಾಮಕರಣಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದನ್ನು ಇದೇ ವೇಳೆ ಸ್ಮರಿಸಬಹುದಾಗಿದೆ.