Site icon Harithalekhani

ವಿಳಂಬ ಸಾಕು, ಕಾರಣ ಬೇಡ.. ಗ್ಯಾರಂಟಿ ಹಣ ಕಟಾ ಕಟ್ ವರ್ಗಾಯಿಸಿ; ನಿಖಿಲ್ ಕುಮಾರಸ್ವಾಮಿ ಒತ್ತಾಯ

Transfer guarantee money; Nikhil Kumaraswamy

Transfer guarantee money; Nikhil Kumaraswamy

ಬೆಂಗಳೂರು: ಕಾಂಗ್ರೆಸ್ ಪಂಚ ಗ್ಯಾರಂಟಿಗೆ ದಿನಾಂಕ ಘೋಷಣೆ ಮಾಡಿ. ನಾಲ್ಕೈದು ತಿಂಗಳಾಯ್ತು ಹಣನೇ ಬಂದಿಲ್ಲ ಹಣವೇ, ಯಾವುದಾದರು ಚುನಾವಣೆಗಳು ಸಮೀಪಸಿದಾಗ ಮಾತ್ರ ಮ್ಯಾಜಿಕ್ ಆಗಿ ಹಣ ಜಮವಾಗುತ್ತೆ, ವಿಳಂಬ ಸಾಕು, ಕಾರಣ ಬೇಡ, ಕಟಾ ಕಟ್ ಹಣ ವರ್ಗಾಯಿಸಿ ಎಂದು ನಿಖಿಲ್ ಕುಮಾರಸ್ವಾಮಿ (Nikhil kumaraswamy) ಅವರು ಒತ್ತಾಯಿಸಿದರು.

ಅಧಿಕಾರಕ್ಕಾಗಿ ಕಾಂಗ್ರೆಸ್ ಗ್ಯಾರಂಟಿ

ಮಾನ್ಯ ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರು ಆಗಿರುವ ಶ್ರೀ ಸಿದ್ದರಾಮಯ್ಯ ನವರು ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ “ಮ್ಯಾಜಿಕ್” ಆಗಿ ಹಣ ಜಮವಾಗುತ್ತೆ ಎಂದು ನಿಖಿಲ್ ಅವರು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು, ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಬಣ್ಣದ ಮಾತುಗಳನ್ನ ಹೇಳಿತ್ತು.

ಸಮಸ್ಯೆಯ ನೆಪ ಹಾಸ್ಯಾಸ್ಪದ

ಆದರೆ, ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಬೆಂಗಳೂರು, ಭಾರತದ ಸಿಲಿಕಾನ್ ಕ್ಯಾಪಿಟಲ್, ಜಾಗತಿಕ ತಂತ್ರಜ್ಞಾನ ಕೇಂದ್ರದಲ್ಲಿ DBT ವರ್ಗಾವಣೆ ಸರಿಪಡಿಸಲಾಗುವುದಿಲ್ಲವೇ? ಎಂದು ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ

ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ, ಸಮಯಕ್ಕೆ ಸರಿಯಾಗಿ DBT ವರ್ಗಾವಣೆ ಖಚಿತಪಡಿಸಬೇಕೆಂದು ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಒತ್ತಾಯಿಸಿದರು.

Exit mobile version