ಕುಣಿಗಲ್: ಅವಿವಾಹಿತ ಯುವತಿ ಜನ್ಮ ನೀಡಿದ್ದ ನವಜಾತ ಶಿಶು ಮಾರಾಟ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಆರೋಪದ ಮೇಲೆ ತಾಲೂಕಿನ ಕೊತ್ತಗೆರೆ ಅಂಗನವಾಡಿ ಕಾರ್ಯಕರ್ತೆ ಜ್ಯೋತಿಯನ್ನು ಅಮಾನತುಗೊಳಿಸಲಾಗಿದೆ.
ಕುಣಿಗಲ್ ಆಸ್ಪತ್ರೆ ಯಲ್ಲಿ ಮಾಗಡಿಯ ಅವಿವಾಹಿತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಳು.
ಆ ಮಗುವಿನ ಮಾರಾಟಕ್ಕೆ ಮಧ್ಯಸ್ಥಿಕೆ ವಹಿಸಿದ್ದ ಜ್ಯೋತಿ, ಮುಬಾರಕ್ ಎಂಬುವವರಿಗೆ 60 ಸಾವಿರಕ್ಕೆ ಮಾರಾಟ ಮಾಡಿಸಿದ್ದರು. ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವರದಿ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.