Site icon Harithalekhani

ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ: ಬಸವರಾಜ ಬೊಮ್ಮಾಯಿ

We will bring BJP back to power under the leadership of BSY: Basavaraja Bommai

We will bring BJP back to power under the leadership of BSY: Basavaraja Bommai

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (Yediyurappa) ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಯುಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿ ಅವರು ಮಾತನಾಡಿದರು.

ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ. ಹಲವು ಹೋರಾಟಗಳ ಮೂಲಕ ಅಧಿಕಾರಕ್ಕೆ ಬಂದಿದ್ದರು. ಅಧಿಕಾರಕ್ಕೆ ಬಂದ ಮೇಲೆ‌ ಎಲ್ಲ ಸಮುದಾಯಗಳಿಗೂ ‌ಕಾರ್ಯಕ್ರಮ ಕೊಟ್ಟರು.

ಕೆಳಲಸ್ತರವರಿಗೆ, ಬಡವರಿಗೆ, ಮಹಿಳೆಯರು, ಮಕ್ಕಳಿಗೆ, ರೈತರಿಗೆ ಕಾರ್ಯಕ್ರಮ ಕೊಟ್ಟರು. ಜನ ಯಡಿಯೂರಪ್ಪ ಅವರ ಕಾರ್ಯಕ್ರಮಗಳನ್ನು ಬಯಸುತ್ತಿದ್ದಾರೆ. ಇವತ್ತು ಕಾಂಗ್ರೆಸ್ ದುರಾಡಳಿತ ದೂರ ಮಾಡಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್. ಅಶೋಕ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ನಾಯಕರು ಹಾಜರಿದ್ದರು.

Exit mobile version