Site icon Harithalekhani

ಹಕ್ಕಿ ಜ್ವರ ಭೀತಿ: ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ‌ – ಜಿಲ್ಲಾಧಿಕಾರಿ

Bird flu scare: Public should be careful - Collector

Bird flu scare: Public should be careful - Collector

ಬೆಂ.ಗ್ರಾ.ಜಿಲ್ಲೆ: ಹಕ್ಕಿ ಜ್ವರವು (Bird flu) ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಕಂಡು ಬಂದಿದ್ದು, ಅಲ್ಲದೇ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಳಿಗಳು ಅನುಮಾಸ್ಪದವಾಗಿ ಸಾವನ್ನಪ್ಪಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಯಾವುದೇ ಪಕ್ಷಿಗಳು ಅಥವಾ ಕೋಳಿಗಳು ಅನುಮಾನಾಸ್ಪದವಾಗಿ ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು ಕಂಡುಬಂದಲ್ಲಿ ಹತ್ತಿರದ ಪಶು ಇಲಾಖೆಗೆ ಮಾಹಿತಿ ನೀಡಿ.

ಹಕ್ಕಿ ಜ್ವರ ಕಂಡು ಬಂದ ಸ್ಥಳದಿಂದ 10 ಕೀ.ಮಿ ಸುತ್ತಲಿನ ಗ್ರಾಮಗಳಲ್ಲಿ ಶೀತ ಅಥವಾ ಕೆಮ್ಮು ಮಾದರಿಯ ಪ್ರಕರಣಗಳು, ಜ್ವರ ಪ್ರಕರಣಗಳು, ತಲೆನೋವು, ಸ್ನಾಯುಗಳ ನೋವು, ಗಂಟಲು ನೋವು ಇತರೆ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಮಾಹಿತಿ ನೀಡಿ ಚಿಕಿತ್ಸೆ ಪಡೆಯಿರಿ.

ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಹಕ್ಕಿ ಜ್ವರದ (ಹೆಚ್5ಎನ್1) ಬಗ್ಗೆ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ನೀಡುತ್ತಿದ್ದು, ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಗುರುತಿಸಿ ಮಾಲೀಕರು ಮತ್ತು ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಲು ಕ್ರಮವಹಿಸಲಾಗಿದೆ.

ಸಾರ್ವಜನಿಕರು ಭಯ ಭೀತಿಗೊಳ್ಳದೆ ಎಚ್ಚರದಿಂದ ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು.

ಕೈಗಳನ್ನು ಸಾಬೂನಿನಿಂದ ಆಗಾಗ್ಗೆ ಚೆನ್ನಾಗಿ ತೊಳೆದುಕೊಳ್ಳುವುದು, ಜನ ನಿಬಿಡ ಸ್ಥಳಗಳಲ್ಲಿ ಹಾಗೂ ಇತರೆಡೆ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಿ ಮುನ್ನೆಚ್ಚರಿಕೆಯಿಂದ ಇರಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Exit mobile version