ಬೆಂಗಳೂರು: ಗೃಹ ಸಚಿವ (Home Minister) ಡಾ.ಜಿ.ಪರಮೇಶ್ವರ್ (Dr G Parameshwar) ಮನೆಗೆ ಪೊಲೀಸ್ (Police) ಅಧಿಕಾರಿಗಳು ಅಥವಾ ಸಿಬ್ಬಂದಿ ನೇರವಾಗಿ ಭೇಟಿ ನೀಡಬಾರದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮೆಮೋ(ಸೂಚನೆ) ಹೊರಡಿಸಿದ್ದಾರೆ.
ಯಾವ ಪೊಲೀಸ್ ಅಧಿಕಾರಿ ಅಥವಾ ಪೊಲೀಸ್ ಸಿಬ್ಬಂದಿಗಳು ಗೃಹ ಸಚಿವರ ಮನೆಗೆ ನೇರವಾಗಿ ಹೋಗುವಂತಿಲ್ಲ ಅಂತ ಡಿಜಿ ಐಜಿಪಿ ಆದೇಶ ಹೊರಡಿಸಿದ್ದಾರೆ.
ಗೃಹ ಸಚಿವರ ಮನೆಗೆ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಆಗಾಗ ಭೇಟಿ ನೀಡುತ್ತಲೇ ಇರುತ್ತಾರೆ. ವರ್ಗಾವಣೆ ಹಾಗೂ ಕೆಲಸದ ವಿಚಾರವಾಗಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇರವಾಗಿ ಗೃಹಸಚಿವರ ಕಚೇರಿಗಷ್ಟೇ ಅಲ್ಲದೇ, ಮನೆಗೂ ನಿರಂತರವಾಗಿ ಭೇಟಿ ಮಾಡುತ್ತಲೇ ಇರುತ್ತಾರೆ.
ಹೀಗಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ.