Second PUC exam from tomorrow

ನಾಳೆಯಿಂದ ದ್ವಿತೀಯ PUC ಪರೀಕ್ಷೆ.. ಉಚಿತ ಸಾರಿಗೆ ಸೌಲಭ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ; ದ್ವಿತೀಯ ಪಿಯುಸಿ (PUC) ಪರೀಕ್ಷೆಯು ಮಾ.1ರಿಂದ ಆರಂಭಗೊಳ್ಳಲಿದ್ದು, ಜಿಲ್ಲೆಯಲ್ಲಿ ಈ ಬಾರಿ  11431 ವಿದ್ಯಾರ್ಥಿಗಳು ಪರೀಕ್ಷೆಗೆ  ನೋಂದಾಯಿಸಿ ಕೊಂಡಿದ್ದಾರೆ ಎಂದು  ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1 ರಿಂದ 20 ವರೆಗೆ  ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಕೈಗೊಂಡಿರುವ ಸಿದ್ದತೆ ಕುರಿತು ಮಾಹಿತಿ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 3, ದೇವನಹಳ್ಳಿ ತಾಲ್ಲೂಕಿನಲ್ಲಿ 3, ಹೊಸಕೋಟೆ ತಾಲ್ಲೂಕಿನಲ್ಲಿ 5  ಮತ್ತು ನೆಲಮಂಗಲ ತಾಲ್ಲೂಕಿನಲ್ಲಿ 6 ಒಟ್ಟು   17 ಪರೀಕ್ಷಾ ಕೇಂದ್ರಗಳಲ್ಲಿ  ದ್ವಿತೀಯ ಪಿಯುಸಿ  ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ ಸಿದ್ದತೆ ನಡೆಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ  ನೋಂದಾಯಿಸಿಕೊಂಡಿರುವ 11341 ವಿದ್ಯಾರ್ಥಿಗಳಲ್ಲಿ 10757 ಹೊಸ ವಿದ್ಯಾರ್ಥಿಗಳು, 183 ಖಾಸಗಿ ವಿದ್ಯಾರ್ಥಿಗಳು, 401 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಬಾಲಕಿಯರ ಸಂಖ್ಯೆ ಹೆಚ್ಚು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಲ್ಲಿ ಬಾಲಕಿಯರ ಸಂಖ್ಯೆ ಮುಂದಿದೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6247 ಬಾಲಕಿಯರು  ಮತ್ತು 5094 ಬಾಲಕರು  ಬರೆಯಲಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ ಮಾರ್ಗದರ್ಶನದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಕ್ರಮಕೈಗೊಳ್ಳಲಾಗಿದೆ.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 8 ಸರಕಾರಿ ಪದವಿಪೂರ್ವ ಕಾಲೇಜು, 3 ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜು, 6 ಖಾಸಗಿ ಅನುದಾನ ರಹಿತ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಬೆಳಗ್ಗೆ 10:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳು

ದೊಡ್ಡಬಳ್ಳಾಪುರ: ಸರ್ಕಾರಿ ಪದವಿಪೂರ್ವ ಕಾಲೇಜು, ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು, ಶ್ರೀ ದೇವರಾಜ ಅರಸು ಪದವಿಪೂರ್ವ ಕಾಲೇಜು.

ದೇವನಹಳ್ಳಿ: ಸರ್ಕಾರಿ ಪದವಿಪೂರ್ವ ಕಾಲೇಜು, ವಿಜಯಪುರ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರಗತಿ ಬಾಲಕಿಯರ ಪದವಿಪೂರ್ವ ಕಾಲೇಜು.

ಹೊಸಕೋಟೆ: ಸರ್ಕಾರಿ ಪದವಿಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಮಹಾದೇವ ಪದವಿಪೂರ್ವ ಕಾಲೇಜು, ವಿದ್ಯಾವನ ಪದವಿಪೂರ್ವ ಕಾಲೇಜು, ನಂದಗುಡಿ ಸರ್ಕಾರಿ ಪದವಿಪೂರ್ವ ಕಾಲೇಜು.

ನೆಲಮಂಗಲ: ಸರ್ಕಾರಿ ಪದವಿಪೂರ್ವ ಕಾಲೇಜು, ಬಸವೇಶ್ವರ ಪದವಿಪೂರ್ವ ಕಾಲೇಜು, ಬಸವೇಶ್ವರ ಬಾಲಕಿಯರ ಪದವಿಪೂರ್ವ ಕಾಲೇಜು, ಹೊಯ್ಸಳ ಪದವಿಪೂರ್ವ ಕಾಲೇಜು, ದಿವ್ಯ ಜ್ಯೋತಿ ಪದವಿಪೂರ್ವ ಕಾಲೇಜು, ತ್ಯಾಮಗ್ಲೊಂಡು ಸರ್ಕಾರಿ ಪದವಿಪೂರ್ವ ಕಾಲೇಜು.

ಉಚಿತ ಸಾರಿಗೆ ಸೌಲಭ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ   ಪರೀಕ್ಷೆ ಬರೆಯುವ  ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬಿ.ಎಂ.ಟಿ.ಸಿ ಬಸ್ ಗಳಲ್ಲಿ  ಉಚಿತವಾಗಿ ಪ್ರಯಾಣ ಮಾಡುವ  ಸೌಲಭ್ಯವಿದೆ.

ವಿದ್ಯಾರ್ಥಿಗಳು ಉಚಿತ ಸಾರಿಗೆ ವ್ಯವಸ್ಥೆಯ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

ಕಾನೂನು ವ್ಯವಸ್ಥೆ: ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಾಗೃತ ದಳ‌ ವ್ಯವಸ್ಥೆ ಜೊತೆಗೆ ಪರೀಕ್ಷಾ ಕೇಂದ್ರದ  ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಪೊಲೀಸ್ ಭದ್ರತಾ ವ್ಯವಸ್ಥೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ಮುಚ್ಚಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ.

ಪರೀಕ್ಷಾ ದಿನಗಳು

ಮಾ.1 ಕನ್ನಡ, ಅರೇಬಿಕ್
ಮಾ.3 ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.4 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾ.5 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ.7 ಇತಿಹಾಸ, ಭೌತಶಾಸ್ತ್ರ
ಮಾ.10 ಐಚ್ಫಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಗೃಹವಿಜ್ಞಾನ.
ಮಾ.12 ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ.

ಮಾ.13 ಅರ್ಥಶಾಸ್ತ್ರ
ಮಾ.15 ಇಂಗ್ಲೀಷ್
ಮಾ.17 ಭೂಗೋಳಶಾಸ್ತ್ರ
ಮಾ.18 ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ,  ಗಣಕವಿಜ್ಞಾನ.
ಮಾ.19 ಹಿಂದೂಸ್ತಾನಿ ಸಂಗೀತ,  ಮಾಹಿತಿ ತಂತ್ರಜ್ಞಾನ,  ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್  ವೆಲ್ ನೆಸ್
ಮಾ.20. ಹಿಂದಿ

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!