ದೊಡ್ಡಬಳ್ಳಾಪುರ (Doddaballapura); ಕಳೆದ 3 ತಿಂಗಳಿನಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯ ಹೊಟ್ಟೆಯಲ್ಲಿದ್ದ 5 ಕೆಜಿ ತೂಕದ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಹೊರತೆಗೆದಿದ್ದಾರೆ.
ನಗರದ 45 ವರ್ಷದ ಮಹಿಳೆಯೊಬ್ಬರು ಕಳೆದ 3 ತಿಂಗಳಿನಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಈ ಕುರಿತು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಾಗ ಹೊಟ್ಟೆಯಲ್ಲಿ ಗೆಡ್ಡೆ ಇರುವುದು ಕಂಡುಬಂದಿದೆ.

ಚಿಕಿತ್ಸೆ ಆರಂಭಿಸಿದ ವೈದ್ಯರಾದ ಡಾ.ಅರ್ಚನಾ ಅವರು ನಿನ್ನೆ ಸತತ ಎರಡು ಗಂಟೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಸುಮಾರು 5 ಕೆಜಿ ತೂಕವಿರುವ ಗೆಡ್ಡೆಯನ್ನು ಹೊರತೆಗೆದಿದ್ದು, ಗೆಡ್ಡೆಯನ್ನು ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ.
ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯ ಆರೋಗ್ಯದಲ್ಲಿ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಸ್ತ್ರಚಿಕಿತ್ಸೆಯಲ್ಲಿ ಭಾಗವಹಿಸಿದ್ದ ಡಾ.ಅರ್ಚನಾ ಅವರ ತಂಡವನ್ನು ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಟಿಎಚ್‌ಒ ಡಾ.ಶಾರದ ನಾಗನಾಥ್, ಡಾ.ಮಂಜುನಾಥ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.