Site icon Harithalekhani

ಹಕ್ಕಿಜ್ವರ ಭೀತಿ: ಮಾರ್ಗಸೂಚಿ ಬಿಡುಗಡೆ.. ಕೋಳಿ ತಿನ್ನಬಹುದೇ ಬೇಡ್ವೇ ನೋಡ್ಕೊಂಡ್ ಬಿಡಿ

Bird flu: Guidelines released..

Bird flu: Guidelines released..

ಬೆಂಗಳೂರು: ಹಕ್ಕಿ ಜ್ವರ (Bird flu) ನಿಯಂತ್ರಣಕ್ಕೆ ಕೇಂದ್ರ ಸರಕಾರ ಮಾರ್ಗಸೂಚಿ ಬಿಡುಗಡೆ ಗೊಳಿಸಿದ ಬೆನ್ನಲ್ಲೇ ರಾಜ್ಯ ಸರಕಾರವೂ ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ತೆಲಂಗಾಣ, ಆಂಧ್ರಪ್ರದೇಶದ ಬಳಿಕ ಕರ್ನಾಟಕದದಲ್ಲಿ ಹಕ್ಕಿಜ್ವರ ಹೆಚ್ಚಾಗುತ್ತಿರುವ ಹೊತ್ತಲ್ಲಿ ಕೋಳಿ ಸೇವನೆ ಎಷ್ಟು ಸುರಕ್ಷಿತ? ಹಕ್ಕಿಜ್ವರದ ಭೀತಿ ಮಧ್ಯೆಯೂ ಕೋಳಿ ಸೇವನೆಗೆ ಏನೆಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಪಶು ಸಂಗೋಪನೆ ಇಲಾಖೆ ಮಾರ್ಗಸೂಚಿ ಯಲ್ಲಿ ವಿವರಿಸಲಾಗಿದೆ.

ಕೋಳಿ ಸೇವನೆಗೆ ಮಾರ್ಗಸೂಚಿ: 70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು.

ಕೋಳಿ ಮಾಂಸವನ್ನು ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು.

ಅಡುಗೆಗಾಗಿ ಕೋಳಿ ಮಾಂಸ ತಯಾರು ಮಾಡಿದ ಬಳಿಕ ನಂಜು ನಾಶಕದಿಂದ ಕೈಗಳನ್ನು ಶುಚಿಗೊಳಿಸಿ ಕೊಳ್ಳಬೇಕು.

ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆ ಯನ್ನು, ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರ ದಂತೆ ಎಚ್ಚರಿಕೆ ವಹಿಸಬೇಕು.

ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನು ತಿನ್ನಬಾರದು. ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿ ಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಮುಂಜಾಗ್ರತಾ ಕ್ರಮಗಳು

  1. ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು.
  2. ಕೋಳಿ ಫಾರಂನಲ್ಲಿ ಕೆಲಸ ನಿರ್ವಹಿಸುವವರು ತಮ್ಮ ಬಟ್ಟೆ, ಶೂ, ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು.
  3. ಕೋಳಿ ಸಾಕಾಣಿಕೆಗೆ ಬೇಕಾಗುವ ಸಲಕರಣೆಗಳನ್ನು ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೆಷನ್ ಮಾಡಬೇಕು ಮತ್ತು ನಂಜುನಾಶಕ ಆಳವಡಿಸಬೇಕು.
  4. ಕೋಳಿ ಪಂಜರಗಳನ್ನು ನಿತ್ಯ ಶುಚಿ ಮಾಡಬೇಕು. ಆಹಾರ ಮತ್ತು ನೀರನ್ನು ಪ್ರತಿದಿನ ಬದಲಾಯಿಸಬೇಕು.
  5. ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು.
Exit mobile version