Gas pipeline connection to 60 lakh households: MB Patila

60 ಲಕ್ಷ ಮನೆಗಳಿಗೆ ಗ್ಯಾಸ್ ಪೈಪ್ ಲೈನ್ ಸಂಪರ್ಕ: ಎಂಬಿ ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ದರ ಇದ್ದಿದ್ದರಿಂದ ಮನೆಮನೆಗೆ ಗ್ಯಾಸ್ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಈಗ ಈ ಸಮಸ್ಯೆ ಬಗೆಹರಿದಿದ್ದು, 2030ರೊಳಗೆ ಮಿಕ್ಕಿರುವ 60 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್-ಲೈನ್ ಮೂಲಕ ಅಡುಗೆ ಅನಿಲ ಪೂರೈಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ (MB Patila) ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ ಎಸ್ ಅರುಣ್ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

ಗ್ಯಾಸ್ ಪೂರೈಕೆ ಕೊಳವೆ ಅಳವಡಿಸಲು ದೇಶದ ವಿವಿಧ ರಾಜ್ಯಗಳಲ್ಲಿ ಇರುವ ನಗರ ಅನಿಲ ಸರಬರಾಜು ನೀತಿಯ ಪ್ರಕಾರ ಮೀಟರ್ ಗೆ ಒಂದು ರೂಪಾಯಿ ನಿಗದಿಪಡಿಸಲಾಗಿದೆ.

ಉತ್ತರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿನ ಉತ್ತಮ ಉಪಕ್ರಮಗಳ ಬಗ್ಗೆಯೂ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಪತ್ರ ಬರೆದು ತಿಳಿಸಿದೆ. ಆ ಸಂದರ್ಭದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿತ್ತು.

ಸಾರ್ವಜನಿಕ ಹಿತ ಮತ್ತು ಪರಿಸರಸ್ನೇಹಿ ಕ್ರಮ ಎಂದು ನಾವೂ ಇದನ್ನು ಒಪ್ಪಿಕೊಂಡಿದ್ದೇವೆ. ಇದರಂತೆ ರಾಜ್ಯದಲ್ಲಿ ಒಟ್ಟು 66.25 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸುವ ಮತ್ತು 1,022 ಸಿಎನ್ ಜಿ ಮರುಪೂರಣ ಕೇಂದ್ರಗಳನ್ನು ತೆರೆಯುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

2015ರಲ್ಲಿ ಈ ಯೋಜನೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಭಾರತೀಯ ಅನಿಲ ಪ್ರಾಧಿಕಾರ (ಗೈಲ್) ಇದರ ಕಾಮಗಾರಿಯನ್ನು ಕೈಗೆತ್ತಿಕೊಂಡಿತು. 2023ರವರೆಗೆ 4.07 ಲಕ್ಷ ಮನೆಗಳಿಗೆ ಗ್ಯಾಸ್ ಪೂರೈಕೆ ಸಂಪರ್ಕ ಕೊಟ್ಟಿದ್ದು, 320 ಸಿಎನ್ ಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಇದರ ಆಮೆಗತಿಯ ಪ್ರಗತಿ‌ ನೋಡಿ ಹೊಸ‌ ನೀತಿ ರೂಪಿಸಲಾಯಿತು. ಅದರ ನಂತರ ಇನ್ನೂ 1.01 ಲಕ್ಷ ಮನೆಗಳಿಗೆ ಈ ಅನುಕೂಲ ಒದಗಿಸಿದ್ದು, 154 ಸಿಎನ್ ಜಿ ಕೇಂದ್ರಗಳನ್ನು ಆರಂಭಿಸಲಾಗಿದೆ.

ಈಗ ಮತ್ತಷ್ಟು ವೇಗ ನೀಡಲು ಸ್ಥಳೀಯ ನಗರ ಸಂಸ್ಥೆಗಳ ಜತೆಗೂ‌ ಸಮನ್ವಯದ ಸಭೆಗಳನ್ನು ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಯೋಜನೆಯಲ್ಲಿ ಇದುವರೆಗೂ ಒಟ್ಟು 5.10 ಲಕ್ಷ ಮನೆಗಳಿಗೆ ಸೌಲಭ್ಯ ಸಿಕ್ಕಿದ್ದು, 474 ಸಿಎನ್ಜಿ ಕೇಂದ್ರಗಳು ಕಾರ್ಯಾರಂಭ ಮಾಡಿವೆ. ಮುಂದಿನ ಐದು ವರ್ಷಗಳಲ್ಲಿ ಬಾಕಿ ಇರುವ ಗುರಿಯನ್ನು ತಲುಪಲಾಗುವುದು.

ಇದಕ್ಕೆ ಸಂಬಂಧಿಸಿದಂತೆ 2024ರ ಜುಲೈನಲ್ಲಿ ಸ್ಥಳೀಯ ಸಂಸ್ಥೆಗಳು ಮತ್ತು ಲೋಕೋಪಯೋಗಿ ಇಲಾಖೆಗಳ ಅನುಮತಿ ಕೊಡಲಾಗಿದೆ ಎಂದು ಪಾಟೀಲ ಹೇಳಿದ್ದಾರೆ.

ಲಾಭ ವರ್ಗ: ಕೇಂದ್ರ ಸರ್ಕಾರದ ಸೂಚನೆ‌ ಪ್ರಕಾರ ಮೀಟರ್ ಗೆ ಒಂದು ರೂಪಾಯಿ ನಿಗದಿಪಡಿಸಿದ್ದು, ಇದರಿಂದ ಆಗುವ ಲಾಭವನ್ನು ಅನಿಲ ಸರಬರಾಜು ಕಂಪನಿಗಳು ನಂತರದ ದಿನಗಳಲ್ಲಿ ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹೇಳಿ ಸಂಬಂಧಪಟ್ಟವರಿಂದ ಮುಚ್ಚಳಿಕೆ ಬರೆಸಿಕೊಳ್ಳಾಗಿದೆ.

ಈ ಅಂಶವನ್ನು ಹೊಸ ನೀತಿಯಲ್ಲೂ ಅಳವಡಿಸಲಾಗಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜಕೀಯ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಗಳಲ್ಲಿಯೂ ಐವತ್ತು ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಂಸದ Basavaraj Bommai

[ccc_my_favorite_select_button post_id="105001"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

ಗುಂಪುಗಳ ನಡುವಿನ ಕಂಡು ಬೆಚ್ಚಿ ಬಿದ್ದ ಜನರು. ದೊಡ್ಡಬಳ್ಳಾಪುರ ನಗರದಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಮೀತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Doddaballapura

[ccc_my_favorite_select_button post_id="105003"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!