ದೊಡ್ಡಬಳ್ಳಾಪುರ (Doddaballapura); ತಾಲೂಕಿನಲ್ಲಿ ಅಪಘಾತಗಳ (Accident) ಸರಣಿ ಮುಂದುವರೆದಿದ್ದು, ಇಂದು ಒಂದೇ ದಿನ ಮೂರು ಅಪಘಾತಗಳು ಸಂಭವಿಸಿವೆ.
ಇಂದು ಬೆಳಗ್ಗಿನ ಜಾವ ನಾರನಹಳ್ಳಿ ಗೇಟ್ ಟ್ರಾಕ್ಟರ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆನ್ನಲೇ, ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಬಳಿ ಮೊಗಚಿ ಬಿದ್ದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಲ್ಲದೆ ಸಂಜೆ ಕುರುಬರಹಳ್ಳಿ ಬಳಿ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಂಭವಿಸುತ್ತಿರುವ ಅಪಘಾತಗಳಿಂದಾಗಿ ಸಾರ್ವಜನಿಕರು ಆತಂಕಕ್ಕೀಡಾಗಿದ್ದು, ಮಿತಿ ಮೀರಿದ ವೇಗ, ಅವೈಜ್ಞಾನಿಕ ರಸ್ತೆ ಕಾಮಗಾರಿ, ರಸ್ತೆ ನಡುವಿನ ಗುಂಡಿಗಳು ವಾಹನ ಸವಾರರ ಪ್ರಾಣ ಹರಣಕ್ಕೆ ಕಾರಣವಾಗುತ್ತಿವೆ ಎಂದು ದೂರಿದ್ದಾರೆ.