ದೊಡ್ಡಬಳ್ಳಾಪುರ (Doddaballapura): ಟ್ರಾಕ್ಟರ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ನಾರನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ವಿಜಯಪುರದ ಮೂವರು ಟ್ರಾಕ್ಟರ್ ನಲ್ಲಿ ಶಿವಮೊಗ್ಗಕ್ಕೆ ತೆರಳುವ ವೇಳೆ ರಾಷ್ಟ್ರೀಯ ಹೆದ್ದಾರಿ ನಾರನಹಳ್ಳಿ ಗೇಟ್ ಬಳಿ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಅಪಘಾತದ ಭೀಕರತೆ ಹೇಗಿದೆ ಎಂದರೆ ಡಿಕ್ಕಿ ಹೊಡೆದ ಹಲವು ಮೀಟರ್ ಟ್ರಾಕ್ಟರ್ ಅನ್ನು ಲಾರಿ ಗುದ್ದಿಕೊಂಡೆ ಸಾಗಿದೆ.
ಘಟನೆಯಲ್ಲಿ ಟ್ರಾಕ್ಟರ್ ನಲ್ಲಿ ತೆರಳುತ್ತಿದ್ದ ಮೂವರಿಗೆ ಗಂಭೀರ ಪೆಟ್ಟಾಗಿದ್ದು, ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗಷ್ಟೇ ಇದೇ ರಸ್ತೆಯಲ್ಲಿ ಕಾರು ಅಪಘಾತದಲ್ಲಿ ವಿಜಯಪುರದ ಓರ್ವ ಸಾವನಪ್ಪಿ, ನಾಲ್ಕು ಮಂದಿ ಗಾಯಗೊಂಡಿದ್ದರು.