Site icon Harithalekhani

ದೊಡ್ಡಬಳ್ಳಾಪುರದಲ್ಲಿ BJP ಸಂಸದನ ಮದುವೆ..!

MP's wedding in Doddaballapur..!

MP's wedding in Doddaballapur..!

ದೊಡ್ಡಬಳ್ಳಾಪುರ (Doddaballapura; ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿರುವ ಸಂಸದ ತೇಜಸ್ವಿ ಸೂರ್ಯ ಅವರ ಮದುವೆ ಇಂದು ಮತ್ತು ನಾಳೆ ನಡೆಯಲಿದೆ.

ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನು ವರಿಸಲಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಮದುವೆ

ಅಚ್ಚರಿ ಎಂಬಂತೆ ಸಂಸದ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಅವರ ವಿವಾಹ ಮಹೋತ್ಸವ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಖಾಸಗಿ ರೆಸಾರ್ಟ್ನಲ್ಲಿ ಇಂದು ಮತ್ತು ನಾಳೆ ಶಾಸ್ತ್ರೋಕ್ತವಾಗಿ ನೆರವೇರಲಿದೆ.

ಈ ವಿವಾಹ ಸಮಾರಂಭದಲ್ಲಿ ಲೋಕಸಭೆ ಸಭಾಪತಿ ಓಂ ಬಿರ್ಲಾ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಸೋಮಣ್ಣ, ಶೋಭ ಕರಂದ್ಲಾಜೆ, ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ ಸೇರಿದಂತೆ ಸುಮಾರು 400 ಮಂದಿ ಭಾಗಿಯಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಳಿಕ ನೂತನ ದಂಪತಿಯ ಆರತಕ್ಷತೆ ಕಾರ್ಯಕ್ರಮ ಇದೇ ತಿಂಗಳ 8 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನೆರವೇರಲಿದೆ ಎನ್ನಲಾಗುತ್ತಿದೆ.

Exit mobile version