Site icon Harithalekhani

ಶಾಲೆಗಳಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು: ಕೆ.ನಾಗಣ್ಣ ಗೌಡ

Police helpline number 112 should be prominently displayed in schools: K. Naganna Gowda

Police helpline number 112 should be prominently displayed in schools: K. Naganna Gowda

ಬೆಂ.ಗ್ರಾ.ಜಿಲ್ಲೆ: ಮಕ್ಕಳು ದೇಶದ ಆಸ್ತಿ, ಮಕ್ಕಳ ಹಕ್ಕುಗಳ ಮೇಲಿನ ದೌರ್ಜನ್ಯ ಶಿಕ್ಷಾರ್ಹ ಅಪರಾಧವಾಗಿದ್ದು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ (K.Naganna Gowda) ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ
ಆರ್.ಟಿ.ಇ 2009, ಪೋಕ್ಸೋ 2012 ಹಾಗೂ ಬಾಲನ್ಯಾಯ ಕಾಯ್ದೆ 2015 ರ ಅನುಷ್ಠಾನದ ಕುರಿತು ವಿವಿಧ ಇಲಾಖೆ ಭಾಗಿದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ಮತ್ತು ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಬದುಕುವ ಹಕ್ಕು, ವಿಕಾಸ ಹೊಂದುವ ಹಕ್ಕು, ಭಾಗವಹಿಸುವ ಹಕ್ಕು, ರಕ್ಷಣೆ ಹಕ್ಕು ಪ್ರಮುಖ ಅಂಶಗಳಾಗಿದೆ. ವಿವಿಧ ಕಾರಣಗಳಿಂದ ಮಕ್ಕಳ ಮೇಲೆ ದೌರ್ಜನ್ಯಗಳು, ಹಕ್ಕುಗಳ ಉಲ್ಲಂಘನೆ ನಡೆಯುತ್ತಾ ಬಂದಿರುವುದು ಆಘಾತಕಾರಿ.

ಕಾನೂನು ಅಡಿಯಲ್ಲಿ ಮಕ್ಕಳ ರಕ್ಷಣೆ ಆಗಬೇಕು. ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಶಾಲೆಗೆ ಹಾಜರಾಗುತ್ತಿರುವ ಮಕ್ಕಳು ಮತ್ತು ಶಾಲೆಗೆ ಬರದೇ ಇರುವ ಮಕ್ಕಳ ಬಗ್ಗೆ ಗಮನ ಹರಿಸಬೇಕು. ಶಾಲೆಗೆ ಬರದೇ ಇರುವ ಮಕ್ಕಳು ಕಂಡು ಬಂದಾಗ ಆ ಮಗುವು ಶಾಲೆಗೆ ಬರದೇ ಇರಲು ಕಾರಣ ತಿಳಿದು ಅದನ್ನು ಪರಿಹರಿಸಬೇಕು.

ಶಾಲೆಗಳಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಜೊತೆಗೆ ದೂರು ಪೆಟ್ಟಿಗೆಯನ್ನು ಇರಿಸಲು ಹೇಳಿದರು.

ಬಾಲ್ಯ ವಿವಾಹ, ಭಿಕ್ಷಾಟನೆ, ಮಕ್ಕಳ ಮಾರಾಟ, ಲೈಂಗಿಕ ದೌರ್ಜನ್ಯ, ಬಾಲ ಕಾರ್ಮಿಕ ಪದ್ಧತಿ ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಉಚಿತ ಕರೆ ಮಾಡಿ ದೂರು ನೀಡಬಹುದಾಗಿದೆ.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವುದರಿಂದ ದೇಶದ ಅಭಿವೃದ್ಧಿಗೆ ಪೂರಕ. ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಹೊಸ ಹೊಸ ಕಾನೂನುಗಳು ಬರುತ್ತದೆ, ಕಾನೂನುಗಳು ತಿದ್ದುಪಡಿ ಆಗುತ್ತದೆ. ಆ ಕಾನೂನುಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಕಾಲಕಾಲಕ್ಕೆ ಕಾರ್ಯಾಗಾರಗಳನ್ನು ಏರ್ಪಡಿಸಲಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ. ಬಿ ಬಸವರಾಜು, ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿಯಾದ ರಮೇಶ್ ಟಿ. ಕೆ, ಮುಖ್ಯ ಯೋಜನಾಧಿಕಾರಿಗಳಾದ ರಾಮ ಕೃಷ್ಣಯ್ಯ, ಯೋಜನಾ ನಿರ್ದೇಶಕರಾದ ವಿಠಲ್ ಕಾವ್ಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾಲಕ್ಷ್ಮಿ.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮು ಮಲ್ಲಯ್ಯ, ಡಿವೈಎಸ್ಪಿ ಶಂಕರ್ ಗೌಡ ಪಾಟೀಲ್, ಬಚಪನ್ ಬಚಾವೊ ರಾಜ್ಯ ಸಂಚಾಲಕರು ಬಿನೂ ವರ್ಗಿಸ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು,ಸಿಬ್ಬಂದಿ ವರ್ಗ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.ಸ್ಪರ್ಧೆ ಗಮನ

Exit mobile version