Ladies take note; Free Fashion Designing/ Tailoring Training

ಮಹಿಳೆಯರೆ ಗಮನಿಸಿ; ಉಚಿತ ಫ್ಯಾಶನ್‌ ಡಿಸೈನಿಂಗ್/ ಟೈಲರಿಂಗ್ ತರಬೇತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್‌ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು (Training) ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್‌ ಕಾರ್ಡ್ ಅಥವಾ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್‌ 20 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ:‌ 9241482541, 9380162042, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಬೆಂಗಳೂರು: ರಿಯಲ್‌ ಎಸ್ಟೇಟೆ ದಂಧೆಗೆ, ಕನ್ನಡಿಗರನ್ನು ಒಡೆದು ಆಳಲು ಗ್ರೇಟರ್‌ ಬೆಂಗಳೂರು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ

[ccc_my_favorite_select_button post_id="104151"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಓದಿನಲ್ಲಿ ಹಿನ್ನಡೆ.. ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ..!

ಓದಿನಲ್ಲಿ ಹಿನ್ನಡೆ.. ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ..!

ಕಾಕಿನಾಡ: ತನ್ನ ಇಬ್ಬರು ಮಕ್ಕಳು ಓದಿನಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಬೇಸತ್ತ ತಂದೆಯೋರ್ವ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ (Suicide) ಮಾಡಿಕೊಂಡಿರು ಘಟನೆ ಆಂದ್ರಪ್ರದೇಶದಲ್ಲಿ ವರದಿಯಾಗಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ತಾಡೆಪಲ್ಲಿಗುಡೇನಿಯ ವಾನಪಲ್ಲಿ ಚಂದ್ರಕಿಶೋರ್ ಅವರು ಕಾಕಿನಾಡ ಜಿಲ್ಲೆಯ ವಾಕಲಪುಡಿಯಲ್ಲಿರುವ ಒಎನ್‌ಜಿಸಿ ಕಚೇರಿಯಲ್ಲಿ

[ccc_my_favorite_select_button post_id="104149"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!