ದೊಡ್ಡಬಳ್ಳಾಪುರ: ನಗರದ ತಾಲೂಕು ಕಚೇರಿಯಲ್ಲಿನ ಉಪ ನೊಂದಣಾಧಿಕಾರಿ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ.
ಉಪಲೋಕಾಯುಕ್ತ ಕೆಎನ್ ಫಣೀಂದ್ರ, ಎಸ್ಪಿ ಉದೇಶ್ ಪಿಜೆ ಅವರ ನೇತೃತ್ವದಲ್ಲಿ ನಾಲ್ಕೈದು ಕಾರುಗಳಲ್ಲಿ ಬಂದಿರುವ ಅಧಿಕಾರಿಗಳು ಉಪ ನೊಂದಣಾಧಿಕಾರಿ ಕಚೇರಿಯ ಪರಿಶೀಲನೆ ನಡೆಸುತ್ತಿದ್ದಾರೆ.
ಅಲ್ಲದೆ ಕಚೇರಿಗೆ ಬಂದಿರುವ ಸಾರ್ವಜನಿಕರು ಹೆಚ್ಚಿನ ಹಣ ಇಟ್ಟುಕೊಂಡವರ ವಿಚಾರಣೆ ನಡೆಸುತ್ತಿದ್ದಾರೆ.
ಅಧಿಕಾರಿಗಳು ಜೂಟ್
ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಹಿತಿ ತಿಳಿಯುತ್ತಿದ್ದಂತೆ ಇತರೆ ಇಲಾಖೆಯ ಅಧಿಕಾರಿಗಳು ಬಾಗಿಲು ಬಡಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸಾರ್ವಜನಿಕರು ಲೇವಡಿ ಮಾಡಿದ್ದಾರೆ.
ಇದಕ್ಕೆ ಪೂರಕವೆಂಬಂತೆ ಅಭಿಲೇಖಾಲಯ, ಹಕ್ಕು ದಾಖಲೆ ವಿಭಾಗದ ಕಚೇರಿ ಸಿಬ್ಬಂದಿಗಳು ಬಾಗಿಲಿಗೆ ಬೀಗ ಬಡಿದುಕೊಂಡು ಸ್ಥಳದಿಂದ ತೆರಳಿದ್ದಾರೆ. ಅಲ್ಲದೆ ತಹಶಿಲ್ದಾರ್ ಕೂಡ ಕಚೇರಿಯಲ್ಲಿ ಲಭ್ಯವಿಲ್ಲ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)