Site icon Harithalekhani

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ ಸಿಬ್ಬಂದಿ..!

Suicide: The transport staff surrendered by hanging on the bus..!

Suicide: The transport staff surrendered by hanging on the bus..!

ಬೆಳಗಾವಿ: ಕೆಎಸ್‌ಆರ್‌ಟಿಸಿ (KSRTC) ಬಸ್ ಮೆಕ್ಯಾನಿಕ್ ಒಬ್ಬರು ಬಸ್ ನಲ್ಲೇ ನೇಣಿಗೆ ಶರಣಾಗಿರುವ (Suicide) ಘಟನೆ ಬೆಳಗಾವಿ ಡಿಪೋ 1ರಲ್ಲಿ ನಡೆದಿದೆ.

ಹಳೇ ಗಾಂಧಿನಗರದ ನಿವಾಸಿ ಕೇಶವ ಕಮಡೊಳಿ (57 ವರ್ಷ) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಕೆಎಸ್‌ಆರ್‌ಟಿಸಿ (KSRTC) ಬಸ್ ವಾಶಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೇಶವ್ ಅವರಿಗೆ ಬೆನ್ನು ನೋವಿದ್ದರೂ ಅಧಿಕಾರಿಗಳು ಪಂಚರ್ ಕೆಲಸಕ್ಕೆ ಬದಲಾಯಿಸಿದ್ದರಂತೆ.

ಡ್ಯೂಟಿ ಬದಲಾಯಿಸಿದಂತೆ ಡಿಪೋ ಮ್ಯಾನೇಜರ್ ಅವರು ಸಹಾಯಕ ಕಾರ್ಯ ಅಧೀಕ್ಷಕ ಅವರ ಬಳಿ ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೂ ಕೂಡ ಕೆಲಸ ಬದಲಾಯಿಸಿದಕ್ಕೆ ಕೇಶವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ..

ಈ ಸಂಬಂಧ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಪಡೆದಿದ್ದಾರೆ.

ಈ ವೇಳೆ ಡಿಪೋ ಅಧಿಕಾರಿಗಳು ಕೇಶವ್ ಮಾನಸಿಕ ಅಸ್ವಸ್ಥ ಎಂದು ತಿಳಿಸಿದ್ದಾರೆ.

ಅಧಿಕಾರಿಗಳ ಹೇಳಿಕೆಗೆ ಮೃತನ ಕುಟುಂಬಸ್ಥರು ಕಿಡಿಕಾರಿದ್ದು, ಯಾವ ಆಧಾರದಲ್ಲಿ ಮಾನಸಿಕ ಅಸ್ವಸ್ಥ ಎಂದು ಹೇಳುತ್ತಿದ್ದೀರಿ, ಹುಷಾರಿಲ್ಲ ಡ್ಯೂಟಿ ಬದಲಿಸಬೇಡಿ ಎಂದು ಮನವಿ ಮಾಡಿದರು ಕೂಡ ಕೆಲಸ ಬದಲಾಯಿಸಿದ್ದೀರಿ, ಈಗ ಮಾನಸಿಕ ಅಸ್ವಸ್ಥ ಎಂದು ಸುಳ್ಳು ಹೇಳಿಕೆ ನೀಡಿದ್ದೀರಿ ಎಂದು ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

Exit mobile version