Site icon Harithalekhani

ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ: ಹೈಕೋರ್ಟ್

Plastic bottle ban at functions

Plastic bottle ban at functions

ತಿರುವನಂತಪುರಂ: ಮದುವೆ ಮುಂತಾದ ಸಮಾರಂಭಗಳಲ್ಲಿ ಊಟಕ್ಕೆ ವಿಪರೀತ ಎನ್ನುವಷ್ಟು ಪ್ರಮಾಣದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ಆಗುತ್ತಿರುವುದರಿಂದ ಪರಿಸರ ಮಾಲಿನ್ಯ ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್, ರಾಜ್ಯದಲ್ಲಿ ಇನ್ನು ಮುಂದೆ ಮದುವೆ ಸೇರಿದಂತೆ ಯಾವುದೇ ಕಾರ್ಯಕ್ರಮ, ಸಮಾರಂಭಗಳಲ್ಲಿ ಕುಡಿಯುವ ನೀರು ಒದಗಿಸಲು ಪ್ಲಾಸ್ಟಿಕ್ ಬಾಟಲ್ (Plastic bottle) ಬಳಕೆ ನಿಷೇಧಿಸಿ ಆದೇಶ ಹೊರಡಿಸಿದೆ.

ಪರಿಸರ ಕಾಳಜಿ ತೋರುವಂತೆ ಜನರಿಗೆ ತಿಳಿಹೇಳಿದೆ. ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ನಿವಾರಿಸಲು ಕಠಿಣ ಕ್ರಮ ಅಗತ್ಯ ಎಂದು ಪೀಠ ಹೇಳಿದೆ.

ಘನತ್ಯಾಜ್ಯ ನಿರ್ವಹಣಾ ನಿಯಮ-2016ಕ್ಕೆ ಸಂಬಂಧಿಸಿ ಸುಮೋಟೊ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಲಯ, ಪ್ಲಾಸ್ಟಿಕ್ ನೀರಿನ ಬಾಟಲ್ ನಿಷೇಧವನ್ನು ಪ್ರಾಯೋಗಿಕವಾಗಿ ಹೇಗೆ ಜಾರಿಗೆ ತರಬಹುದು? ಎಂದೂ ಸರಕಾರವನ್ನು ಪ್ರಶ್ನೆ ಮಾಡಿದೆ.

ಮದುವೆ-ಆರತಕ್ಷತೆ ಕಾರ್ಯಕ್ರಮಗಳಲ್ಲಿ 500 ಎಂಎಲ್ ಬಾಟಲ್ ನೀರು ಬಳಕೆಗೆ ನಿಷೇಧವಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ.

100ಕ್ಕೂ ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅನುಮತಿ ಅಗತ್ಯ ಎಂಬ ಕಾಯಿದೆ ಇದೆ. ಸ್ಥಳೀಯ ಆಡಳಿತ ಸಂಸ್ಥೆಗಳು ಈ ಪರವಾನಗಿ ನೀಡುವ ಅಧಿಕಾರವನ್ನು ಹೊಂದಿವೆ.

ಇದೇ ಬಗೆಯಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ ಆದೇಶ ಜಾರಿಗೊಳಿಸಬಹುದು ಎಂದು ರಾಜ್ಯ ಸರಕಾರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

Exit mobile version