ದೊಡ್ಡಬಳ್ಳಾಪುರ (Doddaballapura): ಬೇಸಿಗೆ ಆರಂಭದ ಬೆನ್ನಲ್ಲೇ ಚಿಕ್ಕಬಳ್ಳಾಪುರ ರಸ್ತೆಯಲ್ಲಿನ ಸರ್ಕಾರಿ ಸಮೀಪದ ಮುಖ್ಯರಸ್ತೆಯಲ್ಲಿ ಸಾರ್ವಜನಿಕರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಮೂರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಮಧ್ಯಾಹ್ನ ಏಕಾಏಕಿ ಹೆಜ್ಜೇನು ದಾಳಿ ನಡೆಸಿದ್ದು, ಓರ್ವ ವೃದ್ಧ ಸೇರಿ ನಂದಿ ಬೆಟ್ಟ ರಸ್ತೆಯಲ್ಲಿ ಸಾಗುವ ಸಾರ್ವಜನಿಕರು ತೊಂದರೆಗೆ ಸಿಲುಕಿದ್ದರು.
ಹೆಜ್ಜೇನು ದಾಳಿಯಿಂದ 3 ಮಂದಿ ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ಓರ್ವನನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ. ಉಳಿದ ಇಬ್ಬರಿಗೆ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ಸ್ಥಳೀಯರು ರಸ್ತೆ ಬದಿಯಲ್ಲಿ ಬೆಂಕಿ ಹಚ್ಚಿ ಹೊಗೆ ಹರಡಿಸಲು ಮುಂದಾಗಿದ್ದು ಕಂಡು ಬಂತು.