ಬೆಂಗಳೂರು: ಸರಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು (Doctor service) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟಿಸ್ ಮಾಡುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.
ಪ್ರಶೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ.
9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ 4 ಗಂಟೆವರೆಗೂ ಸರಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ.
ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿತ್ತು. ಆದರೆ ವೈದ್ಯರು ಒಂದು ಗಂಟೆ ಮುಂಚಿತವಾಗಿ ಹೋಗುವುದು ಇಲ್ಲವೇ ತಡವಾಗಿ ಬರುತ್ತಾರೆಂಬ ಆರೋಪ ಕೇಳಿಬರುತ್ತಿದೆ.