Site icon Harithalekhani

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕಾರ್ಯ: ಬಿವೈ ವಿಜಯೇಂದ್ರ

Abridgement of Rights of MLAs by Guarantee Implementation Committee Chairman: BY Vijayendra

Abridgement of Rights of MLAs by Guarantee Implementation Committee Chairman: BY Vijayendra

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ರಾಜ್ಯಪಾಲರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬಿಜೆಪಿ- ಜೆಡಿಎಸ್ ನಿಯೋಗವು ಇಂದು ರಾಜ್ಯಪಾಲರನ್ನು ಭೇಟಿ ಮಾಡಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಿದ್ದು ಇದು ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರಕಾರದ ಅಸಾಂವಿಧಾನಿಕ ನಡೆ ಎಂಬುದನ್ನು ಗೌರವಾನ್ವಿತ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಜನರ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ ಎಂದರು. ಈ ಸರಕಾರಕ್ಕೆ ತಿಳಿಹೇಳುವ ಕೆಲಸ ಮಾಡುವಂತೆ ಹಾಗೂ ಮಧ್ಯಸ್ಥಿಕೆ ವಹಿಸಲು ಮನವಿ ಮಾಡಿದ್ದಾಗಿ ತಿಳಿಸಿದರು.

ನನ್ನ ವಿಧಾನಸಭಾ ಕ್ಷೇತ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು, ಶಾಲೆ ಮತ್ತು ಕಾಲೇಜುಗಳ ಉಸ್ತುವಾರಿ ಸಮಿತಿಗಳಿಗೆ ಶಿಕಾರಿಪುರ ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಕೊಟ್ಟ ಹೆಸರನ್ನು ಪರಿಗಣಿಸಲು ಸೂಚಿಸಿದ್ದಾರೆ. ಇಂಥ ಕೆಲಸ ಬೇರೆ ಕಡೆಯೂ ನಡೆಯುತ್ತಿದೆ.

ಈ ಸಂಬಂಧ ಸದನದಲ್ಲಿ ಹಕ್ಕುಚ್ಯುತಿಯನ್ನು ಮಂಡಿಸಲಿದ್ದೇವೆ ಎಂದು ತಿಳಿಸಿದರು. ಸಚಿವರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಟೀಕಿಸಿದರು.

Exit mobile version