Site icon Harithalekhani

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

No decision has been taken on closing universities: CM Siddaramaiah

No decision has been taken on closing universities: CM Siddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಸದನದಲ್ಲಿ ತಿಳಿಸಿದರು.

ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು.

ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

Exit mobile version