ದೊಡ್ಡಬಳ್ಳಾಪುರ (Doddaballapura): ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಶ್ರೀಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಕರಗ ಮಹೋತ್ಸವಕ್ಕೆ ಆದಿಶಕ್ತಿ ಮಹಾಸಂಸ್ಥಾನ ಮಠದ ಪ್ರಣವಾನಂದಪುರಿ ಮಹಾಸ್ವಾಮೀಜಿಗಳು ಚಾಲನೆ ನೀಡಿದರು.
ಕರಗ ಮಹೋತ್ಸವದ ಅಂಗವಾಗಿ ಭಾನುವಾರ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.
ಕರಗಮಹೋತ್ಸವದಲ್ಲಿ ಶ್ರೀವಿನಾಯಕ ಮುತ್ತಿನ ಪಲ್ಲಕ್ಕಿ ಉತ್ಸವ, ಶ್ರೀಕೃಷ್ಣದೇವರ ಮುತ್ತಿನ ಪಲ್ಲಕ್ಕಿ ಉತ್ಸವ, ಶ್ರೀಆಂಜನೇಯ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ, ಕೊನಘಟ್ಟ ಶ್ರೀವೀರಭದ್ರ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ, ಶ್ರೀಭೀಮನ ಮುತ್ತಿನ ಪಲ್ಲಕ್ಕಿ ಉತ್ಸವ ಸೇರಿದಂತೆ ಹಲವು ಉತ್ಸವಗಳು ಅದ್ದೂರಿಯಾಗಿ ನಡೆದವು.