ದೊಡ್ಡಬಳ್ಳಾಪುರ (Doddaballapura): ತಾಲೂಕಿನ ಪ್ರಸಿದ್ಧ ನಿವೃತ್ತ ಶಿಕ್ಷಕರಾದ ಎ.ಬೈರಪ್ಪ ರೆಡ್ಡಿ ಅವರು ನಿಧನರಾಗಿದ್ದಾರೆ. ಮೃತರಿಗೆ 75 ವರ್ಷ ವಯಸ್ಸಾಗಿತ್ತು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಮೃತರು ಮಡದಿ, ಓರ್ವ ಮಗ ಹಾಗೂ ಮೂವರು ಹೆಣ್ಣುಮಕ್ಕಳು ಸೇರಿದಂತೆ ಅಪಾರ ಶಿಷ್ಯ ವರ್ಗವನ್ನು ಅಗಲಿದ್ದಾರೆ.
ಎ.ಬೈಯಪ್ಪ ರೆಡ್ಡಿ ಅವರ ಅಂತಿಮ ಆಸೆಯಂತೆ ಅವರ ದೇಹವನ್ನು ಬೆಂಗಳೂರಿನ ESI ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಅಂತಿಮ ದರ್ಶನ ಸಲ್ಲಿಸಲು ನಾಳೆ (ಭಾನುವಾರ) ತುಮಕೂರಿನ ಸ್ವಗೃಹ ಅಮರದಲ್ಲಿ ಬೆಳಿಗ್ಗೆ 9ರಿಂದ ಸಂಜೆ 3 ಗಂಟೆವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಟಿಎಪಿಎಂಸಿಎಸ್ ನಿರ್ದೇಶಕ ಎ.ಎನ್.ಹರೀಶ್ ಕುಮಾರ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಎ.ಬೈರಪ್ಪರೆಡ್ಡಿ ಅವರು ಎಬಿಆರ್ ಎಂದೇ ಪ್ರಸಿದ್ಧರಾದವರು.
ಶಿಸ್ತಿಗೆ ಖ್ಯಾತರಾಗಿದ್ದ ಎಬಿಆರ್, ಬರಹಗಾರರಾಗಿ, ವಿಮರ್ಶಕರಾಗಿ, ಸಾಹಿತಿಗಳಾಗಿ, ರಾಜ್ಯ ಮಟ್ಟದ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು.