ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಅವರು ಪತ್ನಿ ಸೇರಿದಂತೆ 6 ಮಂದಿ ಕುಟುಂಬದ ಸದಸ್ಯರ ಜೊತೆ ತಾಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ.
ಈ ವೇಳೆ ತಹಶೀಲ್ದಾರ್ ವಿದ್ಯಾ ವಿಭಾ ರಾಠೋಡ್, ದೇವಾಲಯ ಆಡಳಿತ ಮಂಡಳಿಯ ಮುಖ್ಯಸ್ಥರು ಸ್ವಾಗತ ಕೋರಿದ್ದಾರೆ.
ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ ನಡೆಸಲಾಗುತ್ತಿದೆ.
ಇತ್ತೀಚೆಗಷ್ಟೇ ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ಕಚೇರಿಗೆ ದಿಢೀರ್ ಭೇಟಿ ನೀಡಿದ್ದ ಕೆ.ಎನ್.ಫಣೀಂದ್ರ ಅವರು ಅಧಿಕಾರಿಗಳ ಚಳಿ ಬಿಡಿಸಿ.