Counterfeit medicine.. Minister Dinesh Gundurao's important promise

ನಕಲಿ ಔಷಧಿ.. ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಭರವಸೆ

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಸ್. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತಚತರಿಸಿದ ಸಚಿವರು, ಕಳೆದ 3 ವರ್ಷಗಳಲ್ಲಿ ನಕಲಿ ಔಷಧ ಮಾರಾಟಗಾರರನ್ನು ಪತ್ತೆ ಹಚ್ಚಿ ಕಲಂ 17 ಬಿ, (b), (c) (d) ಮತ್ತು (e) ರ ಔಷಧ ಮತ್ತು ಕಾಂತಿ ವರ್ಧಕ ಅಧಿನಿಯಮ 1940 ಮತ್ತು ನಿಯಮಗಳಡಿಯಲ್ಲಿ ಸೂಕ್ತ ಕ್ರಮಕೈಗೊಂಡು ವಿವಿಧ ನ್ಯಾಯಾಲಯಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.

ಕಳೆದ 3 ವರ್ಷಗಳಲ್ಲಿ ಒಟ್ಟು 20 ನಕಲಿ ಔಷಧ ತಯಾರಿಕಾ ಕಂಪನಿ ಮತ್ತು 01 ಔಷಧ ಮಾರಾಟಗಾರರ ಪ್ರಕರಣಗಳನ್ನು ಪತ್ತೆ ಮಾಡಿ ಮೊಕ್ಕದ್ದಮೆ ಹೂಡಲಾಗಿದೆ. 2022-23 ನೇ ಸಾಲಿನಲ್ಲಿ ಒಟ್ಟು 06, 2023-24ನೇ ಸಾಲಿನಲ್ಲಿ ಒಟ್ಟು 10 ನಕಲಿ ಔಷಧ ತಯಾರಕರು ಮತ್ತು 2024-25 ನೇ ಸಾಲಿನಲ್ಲಿ 04 ನಕಲಿ ಔಷಧ ತಯಾರಕರ ಮತ್ತು 01 ನಕಲಿ ಔಷಧ ಮಾರಾಟಗಾರರ ವಿರುದ್ಧ ವಿವಿಧ ಮಾನ್ಯ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗಿದೆ.

ಕಾನೂನು ರೀತ್ಯಾ ಅಗತ್ಯ ಕ್ರಮಗಳನ್ನು ಸಹ ಜರುಗಿಸಲಾಗಿದೆ. ಈ ಬಗ್ಗೆ ಕೂಡಲೇ Drug Recall policy ಜಾರಿ ಮಾಡುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಆಹಾರ ಸುರಕ್ಷತಾ ಪ್ರಾಧಿಕಾರದಲ್ಲಿ ಎರಲು ಸೇವೆಯಲ್ಲಿರುವವರನ್ನು ವಾಪಸ್ಸು ಪಡೆಯಲಾಗುವುದು. ವೈದ್ಯರ ಅಗತ್ಯತೆ ಇಲಾಖೆ ಇದೆ. ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 130 ಅಧಿಕಾರಿ ನೌಕರರು ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದು, ಅವರನ್ನು ಇಲಾಖೆಗೆ ವಾಪಸ್ಸು ಪಡೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಶರವಣ ಟಿ.ಎ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಹಲವಾರು ಬಾರಿ ವಾಪಸ್ಸು ಪಡೆಯಲು ಅದೇಶ ಮಾಡಿದ್ದರೂ ಸಹ ಅಧಿಕಾರಿಗಳು ಕರ್ನಾಟಕ ಆಡಳಿತ ನ್ಯಾಯಾಲಯದಲ್ಲಿ (ಕೆ.ಎ.ಟಿ) ಮೊಕ್ಕದ್ದಮೆ ಹೂಡಿ, ಸ್ಟೇ ತಂದು ಅಲ್ಲೇ ಮುಂದುವರೆಯುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಅಧಿಕಾರಿ / ನೌಕರರನ್ನು ವಾಪಸ್ಸು ಪಡೆಯಲು ಕ್ರಮ ವಹಿಸಲಾಗುವುದು.

ಕೆಲ ಅಧಿಕಾರಿಗಳು ನಕಲಿ ಅಂಕಪಟ್ಟಿ ಸಲ್ಲಿಸಿರುವ ದೂರಿನನ್ವಯ ಇಲಾಖೆಗೆ ಬಂದಂತಹ ದೂರಿನ ಆಧಾರದ ಮೇರೆಗೆ ಮುಖ್ಯ ಜಾಗೃತಾಧಿಕಾರಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರು ತನಿಖೆ ನಡೆಸಿ 2016ನೇ ಫೆಬ್ರವರಿ 23 ರಂದು ತನಿಖಾ ವರದಿ ಸಲ್ಲಿಸಿದ್ದು, ಸಿಬ್ಬಂದಿಗಳ ವಿದ್ಯಾರ್ಹತೆ ನೈಜತೆ ಬಗ್ಗೆ ಖಾತರಿಪಡಿಸಿಕೊಳ್ಳಳು ಸೂಚಿಸಿದ್ದು, ಅದರಂತೆ ನಿರ್ದೇಶನಾಲಯವು 2017ನೇ ಮಾರ್ಚ್ 31ರ ಪತ್ರದಲ್ಲಿ ಮೈಸೂರಿನ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಇವರಿಗೆ ಕೋರಲಾಗಿತ್ತು.

ಅಂಕಪಟ್ಟಿ ಪರಿಶೀಲಿಸಿದ ವಿಶ್ವವಿದ್ಯಾಲಯ 6 ಕಿರಿಯ ಆರೋಗ್ಯ ಸಹಾಯಕರುಗಳ ದಾಖಲಾತಿಗಳು ನೈಜತೆಯಿಂದ ಕೂಡಿರುವುದಿಲ್ಲ ಎಂದು ವರದಿ ನೀಡಿರುತ್ತಾರೆ.

ಇದರ ಆಧಾರದ ಮೇಲೆ ಸುಳ್ಳು ಅಂಕಪಟ್ಟಿ ಪತ್ತು ಪ್ರಮಾಣ ಪತ್ರಗಳನ್ನು ನೀಡಿದ್ದ 6 ಕಿರಿಯ ಸಹಾಯಕರುಗಳನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ 2018ನೇ ಜನವರಿ 10 ರಂದು ಅಮಾನತ್ತುಗೊಳಿಸಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದರು.

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!