ದೊಡ್ಡಬಳ್ಳಾಪುರ: ಕರ್ನಾಟಕ ರತ್ನ ದಿ.ಡಾ.ಪುನೀತ್ ರಾಜ್‍ಕುಮಾರ್ (Puneeth Rajkumar) ಅವರ 50ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ತಾಲೂಕಿನ ವಿವಿಧೆಡೆಗಳಲ್ಲಿ ಆಚರಿಸಲಾಯಿತು.
ತಾಲೂಕಿನಾದ್ಯಂತ ಅನೇಕ ಗ್ರಾಮಗಳಲ್ಲಿ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಪೂಜೆ, ಅನ್ನ ಸಂತರ್ಪಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ನಾಲ್ಕನೇ ವರ್ಷದ ಅಪ್ಪು ಇಲ್ಲದೇ ಹುಟ್ಟುಹಬ್ಬ ಆಚರಿಸಲಾಗುತ್ತಿದ್ದು, ಪುನೀತ್ ರಾಜ್‍ಕುಮಾರ್ ಅವರ ಸಾಧನೆಯ ಗುಣಗಾನ ಕಂಡುಬರುತ್ತಿತ್ತು.
ನಗರದ ವಿವೇಕಾನಂದ ನಗರದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಂದ ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ಕುಮಾರ್ ಕಟೌಟ್ ಅನಾವರಣ ಮಾಡಲಾಯಿತು.
ಅಭಿಮಾನಿಗಳಿಂದ ಇಲ್ಲಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ, ಲೇಖನಿ ಸಾಮಗ್ರಿಗಳನ್ನು ನೀಡಲಾಯಿತು.
ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ನಡೆಸಲಾಯಿತು.
ಪುನೀತ್ ರಾಜ್‍ಕುಮಾರ್ ಅವರ ಚಿತ್ರಗಳು ಕುಟುಂಬ ಸಮೇತ ನೋಡುವಂತಹ ಚಿತ್ರಗಳಾಗಿದ್ದು, ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿವೆ.
ಬಾಲನಟನಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಾನ್ ಕಲಾವಿದ ಪುನೀತ್ ಆಗಿದ್ದು, ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.
ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುವ ಮೂಲಕ ಸಮಾಜ ಮುಖಿ ಕಾರ್ಯ ಮಾಡುತ್ತಿದ್ದಾರೆ ಎಂದು ಅಭಿಮಾನಿ ಮುಖಂಡರು ಸ್ಮರಿಸಿದರು.
ವಿವೇಕಾನಂದ ನಗರದ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
