Discussion for promotion of physical teachers to the post of co-teachers; Minister Madhu Bangarappa

ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು ಚರ್ಚೆ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ (Madhu bangarappa) ಅವರು ತಿಳಿಸಿದರು.

ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಬೇರೆ ಆಗಿರುತ್ತದೆ.

ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತುತ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಂತೆ ಗ್ರೂಪ್ ಬಿ ಮತ್ತು ಮುಖ್ಯ ಶಿಕ್ಷಕರು / ಉಪ ಪ್ರಾಂಶುಪಾಲರು ವೃಂದದ ಹುದ್ದೆಗೆ ಬಡ್ತಿಗೆ, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದವು ಪೋಷಕ ವೃಂದವಾಗಿರುತ್ತದೆ.

ಮುಖ್ಯ ಶಿಕ್ಷಕರ ವೃಂದಕ್ಕೆ, ವೃಂದ ಮತ್ತು ನೇಮಕಾತಿ ನಿಯಮದಂತೆ ನಿಗದಿಪಡಿಸಿರುವ ವಿದ್ಯಾರ್ಹತೆ ಎಂದರೆ ಪದವಿ ಜೊತೆಗೆ ಶೈಕ್ಷಣಿಕ ಆಡಳಿತಕ್ಕೆ ಅಗತ್ಯ ಇರುವ ಬಿ.ಎಡ್ ಪದವಿ. ದೈಹಿಕ ಶಿಕ್ಷಣ ಶಿಕ್ಷಕರು ಬಿ.ಎಡ್. ಪದವಿಯನ್ನು ಹೊಂದಿರುವುದಿಲ್ಲ.

ಮುಖ್ಯ ಶಿಕ್ಷಕರು ಬೋಧನೆಯಲ್ಲಿ ಪ್ರಾವೀಣ್ಯತೆ ಹಾಗೂ ಅನುಭವವನ್ನು ಹೊಂದಿರುತ್ತಾರೆ. ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ಮಾಡುತ್ತಾರೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆ ತರಬೇತಿ ಆಗಿಲ್ಲದೆ ಇರುವುದರಿಂದ ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ.

ಮುಖ್ಯ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು / ಹಿರಿಯ ಉಪನ್ಯಾಸಕರು ನಿರ್ದೇಶಕರು ಮಧ್ಯಾಹ್ನ ಯೋಜನೆ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಹುದ್ದೆಗಳಿಗೆ ಭರ್ತಿ ಹೊಂದಲು ಅವಕಾಶವಿರುತ್ತದೆ.

ಈ ಎಲ್ಲಾ ಹುದ್ದೆಗಳು ಶೈಕ್ಷಣಿಕವಾಗಿ ಶಾಲೆಗಳಲ್ಲಿ ವಿಷಯ ಬೋಧನೆ ಅನುಭವವನ್ನು ಹಾಗೂ ಶೈಕ್ಷಣಿಕ ಮಾರ್ಗದರ್ಶನ ನೀಡುವ ಅನುಭವವನ್ನು ಅಪೇಕ್ಷಿಸುತ್ತದೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆಯ ತರಬೇತಿ ಇರುವುದಿಲ್ಲ. ಬದಲಾಗಿ ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾತ್ರ ತರಬೇತಿಯನ್ನು ಪಡೆದಿರುತ್ತಾರೆ.

ದೈಹಿಕ ಶಿಕ್ಷಣದ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತಿದ್ದು, ಇವರ ಪ್ರಾವೀಣ್ಯತೆ ಹಾಗೂ ಅನುಭವ ಆಧಾರದ ಮೇಲೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಸಹಾಯಕ ನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರು (ದೈಹಿಕ ಶಿಕ್ಷಣ) ಹುದ್ದೆಗಳಿಗೆ ಮುಂಬಡ್ತಿ ಕಲ್ಪಿಸಲಾಗಿದೆ.

ಶೈಕ್ಷಣಿಕ ಆಡಳಿತದ ಹಿತದೃಷ್ಠಿಯಿಂದ ಪ್ರಸ್ತುತ ವೃಂದ ಮತ್ತು ನೇಮಕಾತಿ ನಿಯಮದಂತೆ ಪದವಿ ಹಾಗೂ ಶಿಕ್ಷಣದಲ್ಲಿ ಪದವಿ ವಿದ್ಯಾರ್ಹತೆ ಪೋಷಕ ವೃಂದ ಎಂಬುದಾಗಿ ಗುರುತಿಸಿರುವ ವೃಂದದಿಂದ ಮುಖ್ಯ ಶಿಕ್ಷಕರ ವೃಂದಕ್ಕೆ ಬಡ್ತಿಗಳನ್ನು ಪರಿಗಣಿಸಲಾಗುತ್ತಿದೆ.

ಆದಾಗ್ಯೂ ದೈಹಿಕ ಶಿಕ್ಷಕರಿಗೆ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಆದೇಶಗಳನ್ನು ಪರಿಶೀಲಿಸಿ ನಂತರ ಮಾನ್ಯ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ

ಜಮೀನು ಒತ್ತುವರಿ ಆರೋಪ.. ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ ಇಷ್ಟು| Video

ಜಮೀನು ಒತ್ತುವರಿ ಆರೋಪ.. ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ ಇಷ್ಟು| Video

ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ

[ccc_my_favorite_select_button post_id="104272"]
5 ವರ್ಷಗಳಲ್ಲಿ 51 ಜನ ನೇಕಾರರು ಆತ್ಮಹತ್ಯೆ..!

5 ವರ್ಷಗಳಲ್ಲಿ 51 ಜನ ನೇಕಾರರು ಆತ್ಮಹತ್ಯೆ..!

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ (Suicide) ಮಾಡಿಕೊಂಡ ಕೈಮಗ್ಗ ನೇಕಾರರಿಗೆ 5 ಲಕ್ಷ ಪರಿಹಾರ ಕೊಡುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡಲಾಗುತ್ತದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ್

[ccc_my_favorite_select_button post_id="104298"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
‘ಮಚ್ಚಾ’ ಎಂದಿದ್ದಕ್ಕೆ ಚಾಕುವಿನಿಂದ ಇರಿತ..!

‘ಮಚ್ಚಾ’ ಎಂದಿದ್ದಕ್ಕೆ ಚಾಕುವಿನಿಂದ ಇರಿತ..!

ಬೆಂಗಳೂರು: ದಾರಿಯಲ್ಲಿ ಹೋಗುತ್ತಿದ್ದಾಗ ಮಚ್ಚಾ ಎಂದು ಕರೆದಿದ್ದಕ್ಕೆ ಒರಿಜಿನಲ್ ಮಚ್ಚಾನನ್ನು (ಬಾಮೈದ) ಕರೆತಂದು ಚಾಕುವಿನಿಂದ (Knife) ಇರಿದಿರುವ ಘಟನೆ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿದೆ. ಕೀರ್ತಿ ಕುಮಾರ್ ಹಲ್ಲೆಗೊಳಗಾದ ಯುವಕ. ಸುನೀಲ್ ಹಾಗೂ ಗಣೇಶ್ ಹಲ್ಲೆ ಮಾಡಿದ ಆರೋಪಿಗಳು. ಮಾ. 14ರಂದು ರಾತ್ರಿ ಈ

[ccc_my_favorite_select_button post_id="104301"]
ದೊಡ್ಡಬಳ್ಳಾಪುರದಲ್ಲಿ ಮತ್ತೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರದಲ್ಲಿ ಮತ್ತೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಅಪಘಾತ (Accident) ಪ್ರಕರಣಗಳಿಗೆ ಕಡಿವಾಣವೇ ಇಲ್ಲವೇ ಎಂಬ ಪ್ರಶ್ನೆ, ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ. ರಾಜಕೀಯ ಪಕ್ಷಗಳ ಕೃಪಾಕಟಾಕ್ಷದಿಂದ ದೊಡ್ಡಬಳ್ಳಾಪುರಕ್ಕೆ ಯಾವ ದಿಕ್ಕಿನಿಂದ ಬಂದರು ದುಡ್ಡು ಕಟ್ಟಿಯೇ ಬರಬೇಕು (ಟೋಲ್ ನಿರ್ಮಾಣ) ಅಂದರೆ

[ccc_my_favorite_select_button post_id="104209"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!