ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಾಲಭವನ ಸೊಸೈಟಿ ಯೋಜನೆಯಡಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಬಾಲಭವನಗಳ ಚಟುವಟಿಕೆ ಮತ್ತು ಕಾರ್ಯಕ್ರಮಗಳನ್ನು ಸುಗಮವಾಗಿ ನಡೆಸಲು ಜಿಲ್ಲಾ ಮಟ್ಟದಲ್ಲಿ ಖಾಲಿ ಇರುವ ಒಂದು ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ (Application Invitation).
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿ.ಯು.ಸಿ ಮತ್ತು ಮೇಲ್ಪಟ್ಟ ವಿದ್ಯಾಹರ್ತೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅರ್ಜಿ ಸಲ್ಲಿಸಲು 29 ಮಾರ್ಚ್ 2025 ಕೊನೆಯ ದಿನ.
ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ : 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787445 ಇಲ್ಲಿಗೆ ಸಂಪರ್ಕಿಸಬಹುದಾಗಿದೆ.