Suspension of 18 MLAs.. B.Y. Vijayendra told BJP's next move

ಮುಖ್ಯಮಂತ್ರಿಗಳೇ ನಿಮ್ಮ ತುಘಲಕ್ ದರ್ಬಾರಿಗೆ ಇತಿಮಿತಿ ಇದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಮುಸಲ್ಮಾನರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಿನ್ನೆ ಸದನದಲ್ಲಿ ಕದ್ದು ಮುಚ್ಚಿ ಮಂಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ.

ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಬಿಜೆಪಿ, ಸಿದ್ದರಾಮಯ್ಯರ ನೇತೃತ್ವದ ಸರಕಾರದ ತುಘಲಕ್ ದರ್ಬಾರನ್ನು ಸ್ಪಷ್ಟವಾಗಿ ವಿರೋಧಿಸುತ್ತದೆ ಎಂದು ಪ್ರಕಟಿಸಿದರು.

ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಇದನ್ನು ವಿರೋಧಿಸುತ್ತದೆ. ಅಗತ್ಯವಿದ್ದಲ್ಲಿ ರಾಜ್ಯ ಹೈಕೋರ್ಟಿನಲ್ಲೂ ಇದನ್ನು ಪ್ರಶ್ನಿಸುತ್ತೇವೆ ಎಂದು ತಿಳಿಸಿದರು.
ಇವರ ದುರಾಡಳಿತಕ್ಕೆ ಇತಿಮಿತಿ ಇದೆ. ಕಾಂಗ್ರೆಸ್ಸಿನವರು ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ಹೊರಟಿದ್ದಾರೆ.

ಸಿದ್ದರಾಮಯ್ಯ, ಸರಕಾರಕ್ಕೆ ನಿಜವಾಗಿ ಅಲ್ಪಸಂಖ್ಯಾತರ ಬಗ್ಗೆ ಕಳಕಳಿ ಇದೆಯೇ ಎಂದು ಕೇಳಿದರು. ಸ್ವಾತಂತ್ರ್ಯ ಬಂದ ಬಳಿಕ ಸುಮಾರು 50-55 ವರ್ಷ ಸುದೀರ್ಘವಾಗಿ ಈ ದೇಶದಲ್ಲಿ, ರಾಜ್ಯದಲ್ಲಿ ಆಡಳಿತ ನಡೆಸಿದ್ದೀರಿz ಅಲ್ಪಸಂಖ್ಯಾತರಿಗೆ ಶಿಕ್ಷಣಕ್ಕೆ ಒತ್ತು ಕೊಟ್ಟು ಅವರನ್ನು ಮುಂಚೂಣಿಯಲ್ಲಿ ತರುವ ಕೆಲಸವನ್ನು ಕಾಂಗ್ರೆಸ್ಸಿನವರು ಯಾಕೆ ಮಾಡಿಲ್ಲ ಎಂದು ಕೇಳಿದರು.

ಅಲ್ಪಸಂಖ್ಯಾತರಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಮುಂದಕ್ಕೆ ತರುವ ಇಚ್ಛಾಶಕ್ತಿ ಕಾಂಗ್ರೆಸ್ಸಿನವರಿಗೆ ಇರಲಿಲ್ಲ ಎಂದು ಟೀಕಿಸಿದರು.

ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂದು ಸಿದ್ದರಾಮಯ್ಯನವರು ಬಿಂಬಿಸಲು ಹೊರಟಿದ್ದಾರೆ. ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಇಡೀ ದೇಶದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ನ್ಯಾಯ ನೀಡಲು ತ್ರಿವಳಿ ತಲಾಖ್ ಅನ್ನು ಕಿತ್ತು ಹಾಕಿದ್ದು, ಬಿಜೆಪಿಯ ನರೇಂದ್ರ ಮೋದಿಜೀ ಅವರ ಸರಕಾರ ಎಂದು ವಿವರಿಸಿದರು.

ಕೇಂದ್ರ ಸರಕಾರದ ನರೇಂದ್ರ ಮೋದಿಜೀ ಅವರ ಸರಕಾರ ನೀಡಿದ ಕಾರ್ಯಕ್ರಮಗಳು, ಜನ್‍ಧನ್ ಖಾತೆ, ಉಜ್ವಲ ಸೇರಿ ಅನೇಕ ಯೋಜನೆಗಳನ್ನು ಕೊಟ್ಟಿದ್ದು, ಅವನ್ನು ಕೇವಲ ಹಿಂದೂಗಳಿಗೆ ಕೊಟ್ಟಿಲ್ಲ. ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮೀ ಯೋಜನೆ ಕೇವಲ ಹಿಂದೂಗಳಿಗೆ ಕೊಟ್ಟಿಲ್ಲ ಎಂದು ಗಮನ ಸೆಳೆದರು.

ಈ ದೇಶದ ಪ್ರತಿಯೊಬ್ಬರಿಗೂ ಕೇಂದ್ರದ ಮೋದಿಜೀ ಅವರ ಸರಕಾರ ಕಾರ್ಯಕ್ರಮಗಳನ್ನು ನೀಡಿದೆ. ಬಿಜೆಪಿ, ಕಾಂಗ್ರೆಸ್ಸಿನವರ ಮಾದರಿಯಲ್ಲಿ ಮುಸಲ್ಮಾನರನ್ನು ಮತಬ್ಯಾಂಕಿಗೆ ಸೀಮಿತ ಮಾಡಿಲ್ಲ, ಮುಖ್ಯಮಂತ್ರಿಗಳೇ ನಿಮ್ಮ ತುಘಲಕ್ ದರ್ಬಾರಿಗೆ ಇತಿಮಿತಿ ಇದೆ.

ಮುಸಲ್ಮಾನರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿಯನ್ನು ನಾವು ಸ್ಪಷ್ಟವಾಗಿ ವಿರೋಧ ಮಾಡುತ್ತೇವೆ ಎಂದು ಎಚ್ಚರಿಸಿದರು.

ಸದನದ ಒಳಗೆ ಮತ್ತು ಹೊರಗಡೆ ಹೋರಾಟದ ರೂಪುರೇಷೆ ಸಂಬಂಧ ಮುಖಂಡರು ಕುಳಿತು ಚರ್ಚೆ ಮಾಡುತ್ತೇವೆ. ಬಳಿಕ ತೀರ್ಮಾನ ಮಾಡುತ್ತೇವೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ರಾಜಕೀಯ

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bjp

[ccc_my_favorite_select_button post_id="105018"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!