HD Deve Gowda insists on bringing treatment for heart attack and stroke under Ayushman Bharat

ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ದೇವೇಗೌಡರ ಒತ್ತಾಯ

ನವದೆಹಲಿ: ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದರು.

ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿಗಳು; ಹೃದಯಾಘಾತ ಮತ್ತು ಪಾರ್ಶ್ವವಾಯುನಿಂದ ಮರಣ ಹೊಂದುವವರು ಭಾರತದಲ್ಲಿ ಹೆಚ್ಚುತ್ತಿದ್ದಾರೆ.

ಪ್ರತಿ ವರ್ಷ ನಾವು ಲಕ್ಷಾಂತರ ಜನರನ್ನು ಕಳೆದುಕೊಳ್ಳುತ್ತಿದ್ದೇವೆ ಮತ್ತು ದುರದೃಷ್ಟವಶಾತ್ ಶೇ.30ರಷ್ಟು ಹೃದಯಾಘಾತಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಲ್ಲಿ ಸಂಭವಿಸುತ್ತವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿರುವ ಸಲುವಾಗಿ ತಾಲ್ಲೂಕು ಆಸ್ಪತ್ರೆಗಳಲ್ಲಿ ರೂ.18,000 ಕ್ಕೆ ರಕ್ತ ಹೆಪ್ಪುಗಟ್ಟುವಿಕೆ ಕರಗಿಸುವ ಇಂಜೆಕ್ಷನ್‌ಗಳು ಲಭ್ಯವಾಗುವಂತೆ ಮಾಡಬೇಕೆಂದು ಕೋರಿದರು.

ಹೀಗೆ ಮಾಡುವುದರಿಂದ ಗೋಲ್ಡನ್. ಅವರ್ ನಲ್ಲಿಯೇ, ಆರು ಗಂಟೆಗಳ ಒಳಗಾಗಿ ಜೀವಗಳನ್ನು ಉಳಿಸಬಹುದು. ಆರಂಭಿಕವಾಗಿ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟಂಟ್ ಅಳವಡಿಸುವುದಕ್ಕಾಗಿ ರೋಗಿಗಳನ್ನು ಹತ್ತಿರದ ನಗರಗಳಿಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದರು.

ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಒಳಗೊಳ್ಳಲ್ಪಟ್ಟಿದ್ದರೂ ಜೀವ ರಕ್ಷಕ ಔಷಧಿಗಳನ್ನು ಸಹ ಈ ಯೋಜನೆಯಲ್ಲಿ ಸೇರಿಸಬೇಕು ಎಂದು ಅವರು ಮನವಿ ಮಾಡಿದರು.

ಕಳೆದ ಹತ್ತು ವರ್ಷಗಳಲ್ಲಿ ರಾಷ್ಟ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ತೀವ್ರಗತಿಯ ಸುಧಾರಣೆಗೆಲೈ ಆಗುತ್ತಿವೆ. 2013-14ರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ ಕೇವಲ ರೂ.37,000 ಕೋಟಿಗಳಷ್ಟಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಈ ಹಂಚಿಕೆ ರೂ.99,058 ಕೋಟಿಗಳಿಗೆ ಏರಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು.

ಎನ್ ಡಿಎ ಹಾಗೂ ಯುಪಿಎ ಸರ್ಕಾರಗಳ ಅವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಆಗಿರುವ ಬೆಳವಣಿಗೆಯನ್ನು ಹೋಲಿಸಿ ಮಾತನಾಡಿದರು.

ಗ್ರಾಮೀಣ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ದಾದಿಯರ ಕೊರತೆ ನೀಗಿಸಿ

ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಎಂಬಿಬಿಎಸ್ ವೈದ್ಯರ ವೇತನ ಹೆಚ್ಚಳಕ್ಕೆ ದೇವೇಗೌಡರು ಬಲವಾಗಿ ಪ್ರತಿಪಾದಿಸಿದರು, ಗ್ರಾಮೀಣ ವೈದ್ಯರು ಪ್ರಸ್ತುತ ತಿಂಗಳಿಗೆ ರೂ.50,000-60,000 ವೇತನ ಪಡೆಯುತ್ತಿದ್ದಾರೆ. ಕಡಿಮೆ ಸಂಬಳದಿಂದಾಗಿ ವೈದ್ಯರು ಸಹ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿಲ್ಲ.

ಪಿಎಚ್‌ಸಿಗಳು, ಸಿಎಚ್‌ಸಿಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ವೃತ್ತಿಪರರನ್ನು ಆಕರ್ಷಿಸಲು ಸರ್ಕಾರ ಅವರ ವೇತನವನ್ನು ಕನಿಷ್ಠ ರೂ.80,000-90,000ಕ್ಕೆ ಹೆಚ್ಚಿಸಬೇಕು ಎಂದು ಮಾಜಿ ಪ್ರಧಾನಿಗಳು ಒತ್ತಾಯಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡಬೇಕು. ಗ್ರಾಮೀಣ ಆರೋಗ್ಯವನ್ನು ನಾವು ಸುಧಾರಿಸದೇ ಇದ್ದರೆ, ನಮ್ಮ ಹಳ್ಳಿಗಳು ಸರಿಯಾದ ವೈದ್ಯಕೀಯ ಆರೈಕೆಯ ಕೊರತೆಯಿಂದ ಬಳಲುತ್ತಲೇ ಇರುತ್ತವೆ ಎಂದು ಅವರು ಎಚ್ಚರಿಸಿದರು.

ಅದೇ ರೀತಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಮತ್ತು ದಾದಿಯರಿಗೆ ಕಡಿಮೆ ಸಂಬಳದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು, ಅವರಿಗೆ ಪ್ರಸ್ತುತ ತಿಂಗಳಿಗೆ ಕೇವಲ ₹13,000 ವೇತನ ನೀಡಲಾಗುತ್ತದೆ. ಈ ವೇತನವು ದೈನಂದಿನ ವೇತನ ಮಾನದಂಡಕ್ಕಿಂತ ಕಡಿಮೆಯಾಗಿದೆ.

ದಾದಿಯರು ತಮ್ಮ ಕುಟುಂಬಗಳನ್ನು ಉಳಿಸಿಕೊಳ್ಳಲು ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದನ್ನು ಮುಂದುವರಿಸಲು ವೇತನವನ್ನು ಕನಿಷ್ಠ ₹20,000-28,000 ಕ್ಕೆ ಹೆಚ್ಚಿಸಬೇಕು ಎಂದು ಅವರು ಕೋರಿದರು.

HPV ಲಸಿಕೆ ಮತ್ತು ಕ್ಯಾನ್ಸರ್ ತಡೆಗಟ್ಟುವಿಕೆ

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದಲ್ಲಿ HPV ಲಸಿಕೆಯನ್ನು ಸೇರಿಸಬೇಕೆಂದು ದೇವೇಗೌಡರು ಮನವಿ ಮಾಡಿದರು.

ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಒಂದಾಗಿದೆ. HPV ಲಸಿಕೆಯು ಅದರ ಸಂಭವವನ್ನು ಶೇ.80-90ರಷ್ಟು ಕಡಿಮೆ ಮಾಡುತ್ತದೆ.

ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದ ಭಾಗವಾಗಿ ಪ್ರೌಢಶಾಲಾ ಹುಡುಗಿಯರಿಗೆ ಲಸಿಕೆ ಹಾಕುವುದು ಉತ್ತಮ ಪರಿಹಾರೋಪಾಯ ಆಗಿದೆ ಅವರು ಒತ್ತಿ ಹೇಳಿದರು.

ಗ್ರಾಮೀಣ ಆರೋಗ್ಯ ರಕ್ಷಣೆಯಲ್ಲಿ ಖಾಸಗಿ ವಲಯದ ಹೂಡಿಕೆಯನ್ನು ಪ್ರೋತ್ಸಾಹಿಸಿ

ಸೇವೆಯಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ಸೇವೆಯನ್ನು ಸುಧಾರಿಸಲು, ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ವಿಶೇಷ ಕೇಂದ್ರಗಳನ್ನು ಸ್ಥಾಪಿಸುವ ಖಾಸಗಿ ಆಸ್ಪತ್ರೆಗಳಿಗೆ ಐದು ವರ್ಷಗಳ ತೆರಿಗೆ ವಿನಾಯಿತಿ ನೀಡುವ ಬಗ್ಗೆ ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉತ್ತಮ ಆರ್ಥಿಕ ನೆರವು ನೀಡಬೇಕೆಂದು ಅವರು ಒತ್ತಾಯಿಸಿದರು.

ಈ ಕಾರ್ಯಕರ್ತರು ನಮ್ಮ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಜನರಿಗೆ ಸೇವೆ ಸಲ್ಲಿಸಲು ಅವರ ಪ್ರೇರಣೆ ಮತ್ತು ಬದ್ಧತೆಯನ್ನು ಖಚಿತಪಡಿಸಿಕೊಳ್ಳಲು ಅವರ ಗೌರವಧನವನ್ನು ನಿಯತಕಾಲಿಕವಾಗಿ ಪರಿಷ್ಕರಿಸಬೇಕು ಎಂದು ಅವರು ಸರ್ಕಾರದ ಗಮನ ಸೆಳೆದರು.

ಆಯುಷ್ಮಾನ್ ಭಾರತ್ ಯೋಜನೆ ಬಲಪಡಿಸಿ

ಆಯುಷ್ಮಾನ್ ಭಾರತ್ ಯೋಜನೆಯ ಯಶಸ್ಸನ್ನು ದೇವೇಗೌಡರು ಶ್ಲಾಘಿಸಿದರು. ಭಾರತದ ಜನಸಂಖ್ಯೆಯ ಶೇ.70ಕ್ಕೂ ಹೆಚ್ಚು ಜನರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

2018ರಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪ್ರಾರಂಭಿಸಲಾದ ಈ ಉಪಕ್ರಮವು ಲಕ್ಷಾಂತರ ಜನರಿಗೆ ಆರೋಗ್ಯ ಸೇವೆಯನ್ನು ಕಲ್ಪಿಸಿದೆ. ಬಡ ನಾಗರಿಕರು ಸಹ ಗುಣಮಟ್ಟದ ಆರೋಗ್ಯ ಸೇವೆಯನ್ನು ಪಡೆಯುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮತ್ತು ಆರೋಗ್ಯ ಸಚಿವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

ರಾಜಕೀಯ

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bjp

[ccc_my_favorite_select_button post_id="105018"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!