ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಕೋಲಾಹಲಕ್ಕೆ ಕಾರಣವಾಗಿ ಸದನದ ಗೌರವಕ್ಕೆ ಧಕ್ಕೆ ತಂದ ಆರೋಪದ ಕಾರಣ ಬಿಜೆಪಿಯ 18 ಶಾಸಕರನ್ನು ಸದನದಿಂದ ಆರು ತಿಂಗಳ ಕಾಲ ಅಮಾನತುಗೊಳಿಸಿ (Suspend) ಸಭಾಧ್ಯಕ್ಷ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.
ಇಂದು ಮಧ್ಯಾಹ್ನದ ಭೋಜನ ವಿರಾಮದ ನಂತ್ರ ಕಲಾಪ ಆರಂಭಗೊಳ್ಳುತ್ತಿದ್ದಂತೆ ಮುಸ್ಲಿಂ ಮೀಸಲಾತಿ ಮಸೂದೆ ಸೇರಿದಂತೆ ವಿವಿಧ ಮಸೂದೆ ವಿರೋಧಿಸಿ ಬಿಜೆಪಿಯ ಶಾಸಕರು ಪ್ರತಿಭಟನೆ, ಗದ್ದಲ ಕೋಲಾಹಲವನ್ನು ಉಂಟು ಮಾಡಿದರು.
ಈ ಹಿನ್ನಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸ್ಪೀಕರ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
“ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗದು. ಪೀಠಕ್ಕೆ ಅಗೌರವ ತೋರಿದ್ದೀರಿ. ನಿಮ್ಮನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ” ಎಂದು ಸ್ಪೀಕರ್ ಯುಟಿ ಖಾದರ್ ಅವರು ಒಬ್ಬೊಬ್ಬರ ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್ ಅವರು ಅವರನ್ನು ಎತ್ತಿಕೊಂಡು ಹೊರಹಾಕಿದರು.
ಅಮಾನತು ಅವಧಿಯಲ್ಲಿ ಏನೆಲ್ಲ ನಿಷಿದ್ಧ?
ಅಮಾನತು ಅವಧಿಯಲ್ಲಿ ಶಾಸಕರು ವಿಧಾನಸಭೆಯ ಸಭಾಂಗಣ, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವಂತಿಲ್ಲ.
ಅಮಾನತುಗೊಂಡ ಸದಸ್ಯರಾಗಿರುವ ವಿಧಾನಮಂಡಲದ/ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಸಭೆಗಳಲ್ಲಿಯೂ ಭಾಗವಹಿಸುವಂತಿಲ್ಲ.
ವಿಧಾನ ಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಅವರುಗಳ ಹೆಸರಿನಲ್ಲಿ ಯಾವುದೇ ವಿಷಯವನ್ನು ನಮೂದು ಮಾಡತಕ್ಕದಲ್ಲ.
ಅಮಾನತ್ತಿನ ಅವಧಿಯಲ್ಲಿ ಶಾಸಕರು ನೀಡುವ ಯಾವುದೇ ಸೂಚನೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಅಮಾನತ್ತಿನ ಅವಧಿಯಲ್ಲಿ ನಡೆಯುವ ಸಮಿತಿಗಳ ಚುನಾವಣೆಯಲ್ಲಿ ಶಾಸಕರು ಮತದಾನ ಮಾಡುವಂತಿಲ್ಲ.
ಅಮಾನತ್ತಿನ ಅವಧಿಯಲ್ಲಿ ಶಾಸಕರು ಅರ್ಹರಿರುವುದಿಲ್ಲ.
ಯಾವುದೇ ದಿನ ಭತ್ಯೆಯನ್ನು ಪಡೆಯಲು ಅರ್ಹರಿಲ್ಲ.
ಅಮಾನತುಗೊಂಡ ಶಾಸಕರು
ದೊಡ್ಡಣ್ಣ ಗೌಡ ಪಾಟೀಲ್
ಸಿ ಕೆ ರಾಮಮೂರ್ತಿ
ಅಶ್ವತ್ಥ ನಾರಾಯಣ
ಎಸ್ ಆರ್ ವಿಶ್ವನಾಥ್
ಬೈರತಿ ಬಸವರಾಜ
ಎಂ ಆರ್ ಪಾಟೀಲ್
ಚನ್ನಬಸಪ್ಪ
ಬಿ ಸುರೇಶ್ ಗೌಡ
ಉಮನಾಥ್ ಕೋಟ್ಯಾನ್
ಶರಣು ಸಲಗಾರ್
ಶೈಲೇಂದ್ರ ಬೆಲ್ದಾಲ್
ಯಶಪಾಲ್ ಸುವರ್ಣ
ಹರೀಶ್ ಬಿಪಿ
ಭರತ್ ಶೆಟ್ಟಿ
ಮುನಿರತ್ನ
ಬಸವರಾಜ ಮತ್ತಿಮೋಡ್
ಧೀರಜ್ ಮುನಿರಾಜು
ಡಾ ಚಂದ್ರು ಲಮಾಣಿ