4 to 6 lane Bangalore Ring Road (STRR) via Doddaballapura

ದೊಡ್ಡಬಳ್ಳಾಪುರ ಮೂಲಕ 4 ರಿಂದ 6 ಪಥದ ಬೆಂಗಳೂರು ವರ್ತುಲ ರಸ್ತೆ (STRR): ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಗಣನೀಯ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (STRR) ಕೇಂದ್ರ ಸಂಪುಟ ಸಭೆಯ ಮುಂದೆ ಬರಲಿದೆ. ಯೋಜನೆಗೆ ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ ಒಪ್ಪಿಗೆ ನೀಡಿದೆ.

ಈ ಬಗ್ಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದು, ಶೀಘ್ರವೇ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದರು.

ನವದೆಹಲಿಯಲ್ಲಿ ಗುರುವಾರ ನಿತಿನ್ ಗಡ್ಕರಿ ಅವರನ್ನು ಅವರ ಸಂಸತ್ ಭವನದ ಕಚೇರಿಯಲ್ಲಿ ಭೇಟಿಯಾದ ಸಚಿವ ಕುಮಾರಸ್ವಾಮಿ ಅವರು, ಈ ಯೋಜನೆಯ ಬಗ್ಗೆ ಮಹತ್ವದ ಚರ್ಚೆ ನಡೆಸಿದರು.

ಈ ಹಿಂದೆ ಗಡ್ಕರಿಯವರನ್ನು ಸಚಿವರು ಭೇಟಿಯಾಗಿದ್ದರು. ಕುಮಾರಸ್ವಾಮಿ ಅವರ ಮನವಿಯ ಮೇರೆಗೆ ಯೋಜನೆಗೆ ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ (Public Private Partnership Appraisal Committee – PPPAC) ಒಪ್ಪಿಗೆ ನೀಡಿದ್ದು, ಈಗ ಸಂಪುಟದ ಮುಂದೆ ಬರಲಿದೆ. ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ಕೊಡಿಸಲಾಗುವುದು ಎಂದು ಅವರು ಹೆಚ್ಡಿಕೆಗೆ ತಿಳಿಸಿದರು.

ಗಡ್ಕರಿ ಅವರ ಸಕರಾತ್ಮಕ ಸ್ಪಂದನೆ ಬಗ್ಗೆ ಸಂತಸ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, ಉಪನಗರ ವರ್ತುಲ ರಸ್ತೆ ಯೋಜನೆ (Satellite Town Ring Road-STRR) 2013ರಲ್ಲಿಯೇ ಚಾಲನೆ ಪಡೆದಿತ್ತು. ಆದರೆ, ಹಲವಾರು ಕಾರಣಗಳಿಂದ ಅದು ನೆನೆಗುದಿಗೆ ಬಿದ್ದಿತ್ತು.

ಬೆಂಗಳೂರು ಸುತ್ತಮುತ್ತ ಇರುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆಯ ಕಾರ್ಯಗತಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಅವರು ಬರೆದಿದ್ದ ಪತ್ರವನ್ನು ಗಡ್ಕರಿ ಅವರಿಗೆ ನೀಡಲಾಯಿತು ಎಂದು ಹೇಳಿದರು.

4- 6 ಪಥ

4- 6 ಪಥಗಳ ಈ ಯೋಜನೆಯು ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಹಾಗೂ ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ.

ಈ ಉಪನಗರ ವರ್ತುಲ ರಸ್ತೆಯನ್ನು ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯ ಸಂಪರ್ಕಗೊಳಿಸಲಾಗುವುದು. ಕೈಗಾರಿಕೆಗಳಿಗೆ ಸರಕು ಸರಂಜಾಮು ಸಾಗಿಸುವ ಯಾವುದೇ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆಯ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.

2018ರಿಂದ ನೆನೆಗುದಿಗೆ ಬಿದ್ದಿದ್ದ ಉಪನಗರ ಹೊರ ವರ್ತುಲ ರಸ್ತೆ ಯೋಜನೆಗೆ ಗಡ್ಕರಿ ಅವರ ಒಪ್ಪಿಗೆ ಹಾಗೂ ಕುಮಾರಸ್ವಾಮಿ ಅವರ ಒಪ್ಪಿಗೆಯೊಂದಿಗೆ ಮೋಕ್ಷ ಸಿಕ್ಕಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಈ ಯೋಜನೆಯಿಂದ ಹೆಚ್ಚು ಲಾಭವಾಗಲಿದೆ. ಮುಖ್ಯವಾಗಿ ಬೆಂಗಳೂರು ನಗರದ ಮೇಲೆ ಸಂಚಾರದ ಒತ್ತಡ ಕಡಿಮೆ ಆಗಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ಈ ಯೋಜನೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 135 ಕಿ.ಮೀ. ದೂರ ಹಾದು ಹೋಗಲಿದ್ದು, ಯೋಜನೆಯ ಸುಮಾರು ರೂ.4,750 ಕೋಟಿ ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ. 4 ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆಯನ್ನು ಹೊಂದಿರುವ ಈ ಹೆದ್ದಾರಿಯು ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯ ಕಲ್ಪಿಸಲಿದೆ.

ಬೆಂಗಳೂರು ಸುತ್ತಲಿನ ಉಪ ನಗರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಇದು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ ಎಂದು ಅಂದಾಜಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕೈಗಾರಿಕಾಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಇದೆಲ್ಲಾ ಸಾಧ್ಯವಾಗುತ್ತಿದೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ನಿತಿನ್ ಗಡ್ಕರಿ ಅವರು ತೋರಿದ ಬದ್ಧತೆ ಅಭಿನಂದನಾರ್ಹ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜಕೀಯ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಗಳಲ್ಲಿಯೂ ಐವತ್ತು ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಂಸದ Basavaraj Bommai

[ccc_my_favorite_select_button post_id="105001"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

ಗುಂಪುಗಳ ನಡುವಿನ ಕಂಡು ಬೆಚ್ಚಿ ಬಿದ್ದ ಜನರು. ದೊಡ್ಡಬಳ್ಳಾಪುರ ನಗರದಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಮೀತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Doddaballapura

[ccc_my_favorite_select_button post_id="105003"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!