Honeytrap.. Congress has ruined Karnataka's dignity in the country: Basavaraja Bommai

ಹನಿಟ್ರ್ಯಾಪ್ ಪ್ರಕರಣ, ದೇಶದಲ್ಲಿ ಕರ್ನಾಟಕದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

ನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ನಡೆದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (basavaraj bommai) ಆಗ್ರಹಿಸಿದ್ದಾರೆ.‌

ಈ ಕುರಿತು ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಪಕ್ಷ ಆಡಳಿತವನ್ನು ನೈತಿಕ ಅಧಪತನಕ್ಕೆ ತೆಗೆದುಕೊಂಡು ಹೋಗಿದೆ. ಈ ಸರ್ಕಾರದ ಅವಧಿಯಲ್ಲಿ ಎರಡು ವರ್ಷದಲ್ಲಿ ಸುಮಾರು ಹತ್ತು ಹಗರಣಗಳು ಹೊರಗೆ ಬಂದಿವೆ. ಎಲ್ಲಿ ಕೈ ಹಾಕಿದರೂ ಅಲ್ಲಿ ಹಗರಣ ಸಿಗುತ್ತವೆ. ಹೀಗಾಗಿ ವಿಧಾನಸಭೆಯಲ್ಲಿ ನೈತಿಕ ಅಧಪತನ ನೋಡುತ್ತಿದ್ದೇವೆ‌.

ಇದುವರೆಗೂ ರಾಜ್ಯದಲ್ಲಿ ಮನಿ ಕ್ರೈಸಿಸ್ ಇತ್ತು‌ ಈಗ ಹನಿ ಕ್ರೈಸಿಸ್ ಶುರುವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿಯೂ ದಿವಾಳಿಯಾಗಿದೆ. ನೈತಿಕವಾಗಿಯೂ ದಿವಾಳಿಯಾಗಿದೆ. ಒಬ್ಬ ಸಂಪುಟ ಸಚಿವರು ವಿಧಾನಸಭೆಯಲ್ಲಿ ತಮ್ಮ ಮೇಲೆ ಹನಿ ಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳುವ ಸ್ಥಿತಿಗೆ ಬಂದಿದ್ದಾರೆ.

ಕಳೆದ ಹದಿನೈದು ದಿನಗಳಿಂದ ವಿಧಾನಸಭೆಯ ಮೊಗಸಾಲೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ಸುಮ್ಮನೆ ನೋಡುತ್ತ ಕೂತಿದ್ದಾರೆ. ಇವತ್ತು ಅದು ಸ್ಪೋಟಗೊಂಡಿದೆ.

ಸಚಿವ ಸಂಪುಟದಲ್ಲಿಯೇ ಈ ರೀತಿ ನಡೆಯುತ್ತಿರುವಾಗ ಈ ಸಚಿವ ಸಂಪುಟವನ್ನು ಏನೆಂದು ಕರೆಯಬೇಕು. ರಾಜ್ಯವನ್ನು ಆಳುವ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ ಎಂದು ಹೇಳಿದರು.

ನನ್ನ ಪ್ರಕಾರ ಈ ಅನೈತಿಕ ಚಟುವಟಿಕೆ ಮುಖ್ಯಮಂತ್ರಿ ಯವರ ಮೂಗಿನ ನೇರಕ್ಕೆ ನಡೆಯುತ್ತಿರುವುದರಿಂದ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕು. ಇಲ್ಲದಿದ್ದರೆ ರಾಜ್ಯದ ಜನತೆ ಯಾಕಾದರೂ ಇಂತಹ ಸರ್ಕಾರ ಅಧಿಕಾರಕ್ಕೆ ತಂದಿದ್ದೇವೆ ಎಂದು ಪಶ್ಚಾತಾಪ ಪಡುವಂತಾಗುತ್ತದೆ ಎಂದು ಹೇಳಿದರು.

ಸಹಕಾರ ಸಚಿವರು 48 ಜನರ ಸಿಡಿಗಳಿವೆ ಎಂದು ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ರಾಜಣ್ಣ ಅವರಿಗೆ ಈ ಬಗ್ಗೆ ಇನ್ನೂ ಹೆಚ್ಚಿ ಮಾಹಿತಿ ಇರಬಹುದು ಅವರು ಅದೆಲ್ಲವನ್ನೂ ತನಿಖೆಗೆ ಒಪ್ಪಿಸಬೇಕು. ಈ ರೀತಿಯ ಅನೈತಿಕ ಚಟುವಟಿಕೆಗಳನ್ನು ಮಾಡುವ ಯಾವುದೇ ಪಕ್ಷದ ವ್ಯಕ್ತಿ ಇರಲಿ ಅವರ ವಿರುದ್ದ ಕಠಿಣ ಶಿಕ್ಷೆಯಾಗಬೇಕು.

ಈ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಈ ಪ್ರಕರಣದ ಬಗ್ಗೆ ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿರುವುದರಿಂದ ಕೇಂದ್ರದ ನಾಯಕರ ಗಮನಕ್ಕೂ ಬಂದಿರುತ್ತದೆ. ಈ ಪ್ರಕರಣದ ತನಿಖೆಯ ಹಾದಿಯ ನಂತರ ಮುಂದಿನ ಬೆಳವಣಿಗೆಗಳು ನಡೆಯಲಿವೆ ಎಂದು ಹೇಳಿದರು.

ರಾಜಕೀಯ

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bjp

[ccc_my_favorite_select_button post_id="105018"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!