Site icon Harithalekhani

ಹನಿಟ್ರ್ಯಾಪ್.. ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ; ಡಿಕೆ ಶಿವಕುಮಾ‌ರ್ ತಿರುಗೇಟು

Honeytrap.. you say hello they say hello; DK Sivakumar

Honeytrap.. you say hello they say hello; DK Sivakumar

ಮಡಿಕೇರಿ: ಹನಿಟ್ರಾಪ್ ದನಿ ರಾಜ್ಯ ರಾಜಕಾರಣದಲ್ಲಿ ತಲ್ಲಣವ‌ನ್ನು ಉಂಟುಮಾಡಿದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೀಡಿರುವ ತಿರುಗೇಟು ಹಲವು ರಾಜಕಾರಣಿಗಳ ಎದೆಯಲ್ಲಿ ಡವಡವ ಹೆಚ್ಚಿಸುವಂತೆ ಮಾಡಿದೆ.

ಕೊಡಗಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ‘ಸುಮ್ಮನೆ ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಬರುತ್ತಾರೆಯೇ? ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ. ನೀವು ಪ್ರತಿಕ್ರಿಯೆ ನೀಡಲಿಲ್ಲ ಎಂದರೆ ಯಾರಾದರೂ ಮಾತನಾಡಿಸುತ್ತಾರಾ?’ ಈಗ ನೀವ್ ಪ್ರಶ್ನೆ ಕೇಳುದ್ರಿ ನಾ ಉತ್ತರ ಕೊಟ್ಟೆ.. ಇಲ್ಲವಾದರೆ ನಾ ನಿಮ್ಮನ್ನ ಏತಕ್ಕೆ ಮಾತನಾಡಿಸಲಿ ಎಂದು ಆರೋಪ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ.

ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತಿದ್ದೇನೆ ಎಂದು ಹೇಳಿದರು.

ಹನಿಟ್ರ್ಯಾಪ್ ಹಿಂದೆ ಡಿಕೆ ಶಿವಕುಮಾರ್ ತಂಡವಿದೆ ಎನ್ನುವ ಶಾಸಕ ಮುನಿರತ್ನ ಆರೋಪದ ಕುರಿತಾದ ಪ್ರಶ್ನೆಗೆ, ‘ವಿಧಾನಸೌಧದಲ್ಲಿ ಅವರು ಏನೆಲ್ಲಾ ಮಾಡಿದ್ದರು ಎನ್ನುವುದು ಪೊಲೀಸ್ ದೂರಿನಲ್ಲಿ ಇದೆಯಲ್ಲವೇ? ಆರ್.ಅಶೋಕ್ ಗೆ, ಯಡಿಯೂರಪ್ಪ ಅವರಿಗೆ ಏನೋ ಆಯಿತು ಎಂದು ಬಿಜೆಪಿಯವರೇ ಮಾತನಾಡುತ್ತಿದ್ದರಲ್ಲವೇ? ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ.

ಮಾಡಿದ್ದುಣೋ ಮಾರಾಯ ಎಂದು ಅವರ ಪಕ್ಷದವರಿಗೆ ಹೇಳಿ ಒಂದೊಳ್ಳೆ ಆಸ್ಪತ್ರೆಗೆ ಸೇರಿಸಿ ಪರೀಕ್ಷೆ ಮಾಡಿಸಲಿ. ಅವರಿಗೆ ಒಂದಷ್ಟು ತೊಂದರೆಗಳಿವೆ ಎಂದು ವ್ಯಂಗ್ಯವಾಡಿದರು.

ಕರ್ನಾಟಕ ಬಂದ್ ಕುರಿತು ಪ್ರತಿಕ್ರಿಯೆ ನೀಡಿ, ಯಾವ ಗಲಾಟೆಗಳನ್ನೂ ಮಾಡದೆ, ಯಾವ ಬಂದ್‌ ಕೂಡ ಮಾಡದೇ ದಯವಿಟ್ಟು ಎಲ್ಲರೂ ಶಾಂತರೀತಿಯಿಂದ ಇರಬೇಕು ಎಂದು ಮನವಿ ಮಾಡುವೆ ಎಂದು ಹೇಳಿದರು.

Exit mobile version