2nd Airport: Check out the three locations

2ನೇ ವಿಮಾನ ನಿಲ್ದಾಣ: ಮೂರು ಸ್ಥಳಗಳು ಇವೇ ನೋಡಿ.. ಪರಿಶೀಲನೆಗೆ ಕೇಂದ್ರ ತಂಡದ ಆಗಮನ

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ (MB Patila) ಶನಿವಾರ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ ರೂ.1.21 ಕೋಟಿ ಶುಲ್ಕವನ್ನು ಪಾವತಿಸಲಾಗಿದೆ

ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಒಂದು ಜಾಗವನ್ನು ಈ ಸಲುವಾಗಿ ಗುರುತಿಸಲಾಗಿದೆ ಎಂದರು.

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಈ ತಿಂಗಳ 5ರಂದು ಪತ್ರ ಬರೆಯಲಾಗಿತ್ತು. ಅದರಂತೆ ತಂಡವು ಬರುತ್ತಿದೆ.

ತಂಡದ ಸೂಚನೆಯಂತೆ ನಾವು ಈ ತಾಣಗಳ ಕಂದಾಯ ನಕಾಶೆ, 10 ವರ್ಷಗಳ ಹವಾಮಾನ ವರದಿ, ಈ ಜಾಗಗಳ ಜಾಮಿತೀಯ ಲಕ್ಷಣಗಳನ್ನು ವಿವರಿಸುವ ಚಿತ್ರ, ಭಾರತೀಯ ಸರ್ವೇ ಇಲಾಖೆಯ ನಕಾಶೆ, ಉದ್ದೇಶಿತ ನಿಲ್ದಾಣದಲ್ಲಿನ ಕಾರ್ಯಾಚರಣೆ ಸ್ವರೂಪ (ವಿಎಫ್ಆರ್/ಐಎಫ್ಆರ್) ತಿಳಿಸುವ ವಿವರ ಮುಂತಾದವನ್ನು ಸಿದ್ಧಪಡಿಸಿಕೊಂಡಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಈಗ ಇರುವ ವಿಮಾನ ನಿಲ್ದಾಣದ ಮೇಲೆ ಅತೀವ ಒತ್ತಡವಿದೆ. ಇನ್ನೊಂದೆಡೆಯಲ್ಲಿ, 2033ಕ್ಕೆ ಸರಿಯಾಗಿ 150 ಕಿ.ಮೀ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ಹೊಂದುವಂತಿಲ್ಲ ಎನ್ನುವ ಷರತ್ತು ಕೊನೆಗೊಳ್ಳಲಿದೆ.

ಇವೆಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಿನಿಂದಲೇ ಮುಂದಡಿ ಇಡಲಾಗುತ್ತಿದೆ. ಹೀಗೆಯೇ ಮುಂದುವರಿದರೆ 2033ರ ಹೊತ್ತಿಗೆ ಅದು ಬಳಕೆಗೆ ಸಿದ್ಧವಾಗಬಹುದು ಎಂದು ಪಾಟೀಲ ಹೇಳಿದ್ದಾರೆ.

`ಕೆಲವರು ತುಮಕೂರಿನ ಶಿರಾ ಸಮೀಪ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಈ ಕಾರ್ಯಬೇಡಿಕೆ ಸಾಧುವಲ್ಲ. ಶಿರಾದಲ್ಲಿ ವಿಮಾನ ನಿಲ್ದಾಣ ಮಾಡಿದರೆ ಶಿವಮೊಗ್ಗ, ವಿಜಯಪುರದಲ್ಲಿ ಇರುವಂತೆ ಅದೇನಿದ್ದರೂ ಜಿಲ್ಲಾ ಮಟ್ಟದ್ದಾಗುತ್ತದೆ ಅಷ್ಟೆ.

ಬೆಂಗಳೂರಿನ ಜನರಿಗೆ‌ ಅನುಕೂಲ ಆಗಬೇಕಾದರೆ ಅದು ಬೆಂಗಳೂರಿಗೆ ಸನಿಹದಲ್ಲೇ ಇರಬೇಕು. ಆಗ ಮಾತ್ರ ಹೂಡಿಕೆದಾರ ಸಂಸ್ಥೆಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರುತ್ತಾರೆ. ಇಲ್ಲದಿದ್ಧರೆ ಯೋಜನೆಯೇ ಕಾರ್ಯಸಾಧುವಾಗುವುದಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಲ್ದೋಟ ಮಾಲಿನ್ಯ: ಸೂಕ್ತ ಕ್ರಮ

ಕೊಪ್ಪಳದಲ್ಲಿ ಬಲ್ದೋಟ ಸಮೂಹವು 54 ಸಾವಿರ ಕೋಟಿ ರೂ. ಹೂಡಿಕೆ ಮಾಡಿ, ಬಹುದೊಡ್ಡ ಉಕ್ಕು ತಯಾರಿಕೆ ಕಾರ್ಖಾನೆ ಸ್ಥಾಪಿಸಲು ಮುಂದಾಗಿದೆ. ಇದರಿಂದ ಮಾಲಿನ್ಯ ಉಂಟಾಗಲಿದೆ ಎಂದು ಗವಿಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.

ಮಾಲಿನ್ಯದ ಬಗ್ಗೆ ಐಐಎಸ್ಸಿಯಂತಹ ತಟಸ್ಥ ಸಂಸ್ಥೆಯಿಂದ ಅಧ್ಯಯನ ನಡೆಸಲಾಗುತ್ತಿದೆ. ಅದರ ವರದಿಗೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ಒಬ್ಬ ಸಚಿವನಾಗಿ ನನಗೆ ಉದ್ಯಮಗಳು ಬೆಳೆಯಬೇಕಾದ ಅನಿವಾರ್ಯತೆ ಮತ್ತು ಸಾರ್ವಜನಿಕರ ಧ್ವನಿ ಎರಡೂ ಅರ್ಥವಾಗುತ್ತವೆ. ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ಪಾಟೀಲ ಭರವಸೆ ನೀಡಿದ್ದಾರೆ.

ರಾಜಕೀಯ

ದೇಶದಲ್ಲಿ ಕರ್ನಾಟಕವು ಅತ್ಯಂತ ದುಬಾರಿ ರಾಜ್ಯ ಎನಿಸಿದೆ: ಬಿ.ವೈ.ವಿಜಯೇಂದ್ರ

ದೇಶದಲ್ಲಿ ಕರ್ನಾಟಕವು ಅತ್ಯಂತ ದುಬಾರಿ ರಾಜ್ಯ ಎನಿಸಿದೆ: ಬಿ.ವೈ.ವಿಜಯೇಂದ್ರ

ಹಿಂದೂ- ಮುಸಲ್ಮಾನರನ್ನು ಒಡೆಯುವ ಕೆಲಸಕ್ಕೆ ಸಿದ್ದರಾಮಯ್ಯನವರು ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="105358"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!