ದೊಡ್ಡಬಳ್ಳಾಪುರ: ನಗರದ ಖಾಸಗಿ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಮಹಿಳಾ ಘಟಕದ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ (Women’s Day) ಕಾರ್ಯಕ್ರಮವನ್ನು ಅಕ್ಕ ಮಹಾದೇವಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮನ್ನು ಮುಖ್ಯ ಅತಿಥಿ ಜಾನಕಿ ಮಹೇಶ್, ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಸುಜಯ್ ಉದ್ಘಾಟಿಸಿದರು.
ಮುಖ್ಯ ಅತಿಥಿ ಸೃಷ್ಟಿ ಚಾರಿಟೇಬಲ್ ಫೌಂಡೇಶನ್ ಹಾಗೂ ವಿಮೆನ್ ಪವರ್ ಆರ್ಗನೈಜೇಷನ್, & ನಿಮಾನ್ಸ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಯುವಪರ ಯುವ ಪರಿವರ್ತಕಿ ಜಾನಕಿ ಮಹೇಶ್ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಮಕ್ಕಳನ್ನು ಹೇಗೆ ಬೆಳಸಬೇಕು ಎಂದು ಸಲಹೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕದ ಉಪಾಧ್ಯಕ್ಷೆ ಲತಾ ಆರಾಧ್ಯ ಮಾತನಾಡಿ, ಹೆಣ್ಣು ಸಂಸಾರದ ಕಣ್ಣು ಅಷ್ಟೇ ಅಲ್ಲದೆ ಸಮಾಜದ ಕಣ್ಣು ಸಹ ಆಗಿದ್ದಾಳೆ. ಎಲ್ಲಾ ರಂಗದಲ್ಲಿ ಸ್ತ್ರೀ ಮುಂದಿದ್ದಾಳೆ ಎಂದು ತಿಳಿಸಿದರು.
ಜಿಲ್ಲಾ ನಿರ್ದೇಶಕಿ ರೇಣುಕಾ ಅವರು ವಚನ ಗಾಯನ ಹಾಡು ಹಾಡಿದರು. ಮಕ್ಕಳು ಮತ್ತೆ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಹಿಳಾ ಅಧ್ಯಕ್ಷೆ ಪ್ರೇಮ, ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ನಾಗರಾಜು, ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕದ ದೊಡ್ಡಬಳ್ಳಾಪುರ ತಾಲ್ಲೂಕು ಪದಾಧಿಕಾರಿಗಳಾದ ರಾಜೇಶ್ವರಿ, ವೇದ, ಶೋಭಾ, ಸುಮ, ಸರ್ವಮಂಗಳ, ಸೌಮ್ಯ ಮತ್ತಿತರರಿದ್ದರು.