Lakshmi Hebbalkar fulfilled the simanta of 3 thousand pregnant women

3 ಸಾವಿರ ಗರ್ಭಿಣಿಯರಿಗೆ ಸೀಮಂತ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ (lakshmi hebbalkar) ಅವರು ಸಾಮೂಹಿಕವಾಗಿ 3 ಸಾವಿರ ಗರ್ಭಿಣಿಯರಿಗೆ (ಉಡಿ ತುಂಬುವ ಮೂಲಕ) ಸಾಂಕೇತಿಕವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದರು.

ಸರ್ಕಾರದಿಂದ ರಾಜ್ಯದ ಪ್ರತಿಯೊಂದು ಅಂಗನವಾಡಿಗಳನ್ನು ಉನ್ನತ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಭರವಸೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸಿ.ಪಿ.ಎಡ್ ಮೈದಾನದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ, ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ, ವಿಭಾಗೀಯ ಮಟ್ಟದ ಸ್ತ್ರೀ ಶಕ್ತಿ ಗುಂಪುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲೇ ವಿಶೇಷ ಮತ್ತು ವಿನೂತನ ಕಾರ್ಯಕ್ರಮ ಇದಾಗಿದೆ. ಜಿಲ್ಲೆಯಲ್ಲಿ ಗರ್ಭಿಣಿಯರಿಗೆ ಕಾಲಕಾಲಕ್ಕೆ ಪೌಷ್ಟಿಕ ಆಹಾರ, ವೈದ್ಯಕೀಯ ಚಿಕಿತ್ಸೆಯನ್ನು ಇಲಾಖೆಯಿಂದ ಒದಗಿಲಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ಒದಗಿಸಲಾಗುತ್ತಿದೆ. ಪ್ರತಿ ಮನೆಗಳಿಗೆ ಗೃಹ ಜ್ಯೋತಿಯಡಿ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದರು.

ಗರ್ಭಿಣಿಯರ ಮಾನಸಿಕತೆ ಚೆನ್ನಾಗಿರಬೇಕು. ದೇಶಕ್ಕೆ ಉತ್ತಮ ಜ್ಞಾನವಂತ ಪ್ರಜೆ ಸಿಗಬೇಕು ಹಾಗಾಗಿ ಗರ್ಭಾವಸ್ಥೆಯಲ್ಲಿ ಮಗು ಧನಾತ್ಮಕವಾಗಿರಬೇಕು ಎಂಬ ಉದ್ದೇಶದಿಂದ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗರ್ಭಿಣಿಯರು ತಾವು ಹೆರುವ ಮಕ್ಕಳನ್ನು ಭಾರತ ದೇಶಕ್ಕೆ, ರಾಜ್ಯಕ್ಕೆ ಉತ್ತಮ ಕೊಡುಗೆಯಾಗಿ ನೀಡಲಿದ್ದಾರೆ.

ಹಿರಿಯ ನಾಗರಿಕರ ಜಿಲ್ಲಾ ಕಮಿಟಿಯ ನೇತೃತ್ವದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಮಗು ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮ, ಭಾಗ್ಯಲಕ್ಷ್ಮಿ ಯೋಜನೆಯ ಸುಕನ್ಯಾ ಸಮೃದ್ಧಿ 5 ಫಲಾನುಭವಿಗಳಿಗೆ ಪಾಸ್‌ಬುಕ್ ವಿತರಣೆ, ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆಗೆ ಹಾಗೂ ಅತ್ಯುತ್ತಮ ಸ್ತ್ರೀ ಶಕ್ತಿ ಸಂಘದವರಿಗೆ ಸನ್ಮಾನಿಸಲಾಯಿತು.

ರಾಜಕೀಯ

B ಭಕ್ತಿ, G ಜ್ಞಾನದ S ಸಂಗಮವೇ BGS; ಡಿಕೆ ಶಿವಕುಮಾರ್

B ಭಕ್ತಿ, G ಜ್ಞಾನದ S ಸಂಗಮವೇ BGS; ಡಿಕೆ ಶಿವಕುಮಾರ್

ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ, ಪರೋಪಕಾರಾಯ ದುಹಂತಿ ಗಾವಃ ಪರೋಪ ಕಾರಾರ್ಥಮ್ ಇದಂ ಶರೀರಮ್ DK Shivakumar

[ccc_my_favorite_select_button post_id="105376"]
ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ Cmsiddaramaiah

[ccc_my_favorite_select_button post_id="105401"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಯುವತಿಯೋರ್ವಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಚಿತ್ರದುರ್ಗದಲ್ಲಿ.harithalekhani

[ccc_my_favorite_select_button post_id="105392"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!