ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪದಲ್ಲಿ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲಾಗಿದೆ.
ವಿಜಯಪುರ ಕ್ಷೇತ್ರದ ಶಾಸಕರಾಗಿರುವ ಯತ್ನಾಳ ಶಿಸ್ತು ಉಲ್ಲಂಘಿಸುತ್ತಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ಸಂಬಂಧ ಅವರಿಗೆ ಫೆಬ್ರುವರಿ 10ರಂದು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಸತ್ಯವಂತರಿಗಿದು ಕಾಲವಲ್ಲ. ದುಷ್ಟ ಜನರಿಗೆ ಸುಭಿಕ್ಷಕಾಲ ಎಂದಿದ್ದಾರೆ.
ಟ್ವಿಟ್ ಮಾಡಿರುವ ಯತ್ನಾಳ್, ವಂಶ ರಾಜಕಾರಣ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆ, ಉತ್ತರ ಕರ್ನಾಟಕ ಅಭಿವೃದ್ಧಿಗೆ ಮನವಿ ಮಾಡಿದ್ದಕ್ಕೆ ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ.
‘The party has rewarded me for ‘Calling a Spade, a Spade’
ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ.
ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಹಿಂದುತ್ವದ ವಿರುದ್ಧದ ನನ್ನ ಹೋರಾಟವನ್ನು ತಡೆಯುವುದಿಲ್ಲ. ನಾನು ನನ್ನ ಜನರ ಸೇವೆಯನ್ನು ಅದೇ ಹುರುಪಿನಿಂದ ಮತ್ತು ದೃಢತೆಯಿಂದ ಮುಂದುವರಿಸುತ್ತೇನೆ.
ಎಲ್ಲಾ ಕಾರ್ಯಕರ್ತರು, ಹಿತೈಷಿಗಳು, ಸ್ನೇಹಿತರು, ಪರಿಚಯಸ್ಥರು, ಸ್ವಾಮೀಜಿಗಳು, ಮಾಧ್ಯಮಗಳು, ಬೆಂಬಲದ ಆಧಾರ ಸ್ತಂಭವಾಗಿರುವ ನನ್ನ ಕುಟುಂಬ ಮತ್ತು ಸರ್ವಶಕ್ತರಿಗೆ ನಾನು ಧನ್ಯವಾದಗಳು
ಇದನ್ನು ಬರೆಯುವಾಗ ಪುರಂದರ ದಾಸರು ಹೇಳಿದ ಮಾತು ನೆನಪಾಗುತ್ತಿದೆ
ಸತ್ಯವಂತರಿಗಿದು ಕಾಲವಲ್ಲ
ದುಷ್ಟಜನರಿಗೆ ಸುಭಿಕ್ಷಕಾಲ ||
ಉಪಕಾರ ಮಾಡಿದರೆ ಅಪಕರಿಸುವ ಕಾಲ
ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡಲು ನಿರ್ಮೂಲವಾಗುವ ಕಾಲ ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ
ಉಪಕಾರ ಮಾಡಿದರೆ ಅಪಕರಿಸುವ ಕಾಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.