ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ (BJP) ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ವರದಿಯಾಗಿದೆ.
ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎನ್ನಲಾಗುತ್ತಿದೆ.
ಹಾದಿ ತಪ್ಪಿದ್ದ ಬಿಜೆಪಿ ಸರಿ ದಾರಿಗೆ ತರಬೇಕು ಎಂದು ರೆಬಲ್ ಶಾಸಕರ ನೇತೃತ್ವ ವಹಿಸಿದ್ದ ಯತ್ನಾಳ್ ಅವರು ಬಿವೈ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಹೋರಾಟ ನಡೆಸಿದ್ದರು.
ಉಚ್ಚಾಟನೆ ಆದೇಶ
ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರುವರಿ 10 ರಂದು ನೀಡಲಾದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದ್ದೇವೆ.
ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಉತ್ತರಿಸುವಾಗ ಉತ್ತಮ ನಡವಳಿಕೆಯ ಭರವಸೆ ನೀಡಿದ್ದರೂ ಕೂಡ, ನೀವು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣ ಜಾರಿಗೆ ಬರುವಂತೆ ನಿಮ್ಮನ್ನು 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ನೀವು ಇಲ್ಲಿಯವರೆಗೆ ಹೊಂದಿದ್ದ ಪಕ್ಷದ ಯಾವುದೇ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬರೆಯಲಾಗಿದೆ.
ಆದರೆ ಇದು ಅಧಿಕೃತವೋ, ಅಥವಾ ಯತ್ನಾಳ್ ನಕಲಿ ಪತ್ರ ಎನ್ನುತ್ತಾರೆಯೋ ಕಾದು ನೋಡಬೇಕಿದೆ.