Yatnal open challenge to Vijayendra..!

ಬಿಜೆಪಿಯಿಂದ ಯತ್ನಾಳ್ ಉಚ್ಚಾಟನೆ; ದುಃಖಿಸಿದ ವಿಜಯೇಂದ್ರ.. ಟ್ವಿಟ್ ಮಾಡಿದ್ದಾರೆ ನೋಡಿ

ಬೆಂಗಳೂರು: ರಾಜ್ಯ ಬಿಜೆಪಿ (BJP) ವಿಜಯೇಂದ್ರ ನೇತೃತ್ವದಲ್ಲಿ ಸಂಘಟನೆ ಮಾಡುತ್ತಿಲ್ಲ, ಅಡ್ಜಸ್ಟ್ಮೆಂಟ್ ರಾಜಕಾರಣದಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿದ್ದು, ಅಧ್ಯಕ್ಷ ಸ್ಥಾನದಿಂದ‌ ಕೆಳಗಿಳಿಸುವಂತೆ ಬಹಿರಂಗವಾಗಿಯೇ ಹೋರಾಟಕ್ಕಿಳಿದ ಯತ್ನಾಳ್ ಬಣಕ್ಕೆ ಹಿನ್ನಡೆಯಾಗಿದೆ.

ಕೇಂದ್ರದ ಬಿಜೆಪಿ ವರಿಷ್ಠರು ವಿಜಯೇಂದ್ರ ಬಣಕ್ಕೆ ನೋಟೀಸ್ ನೀಡಿ, ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದ್ದಾರೆ.

ಈ ಬೆನ್ನಲ್ಲೇ ವಿಜಯೇಂದ್ರ ಟ್ವಿಟ್ ಮಾಡಿದ್ದು, ಯತ್ನಾಳ್ ಉಚ್ಚಾಟನೆ ಕುರಿತು ಬೇಸರದ ಮಾತುಗಳನ್ನು ಆಡಿದ್ದಾರೆ.

ವಿಜಯೇಂದ್ರ ಟ್ವಿಟ್ (X)

ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ.

ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ ಯತ್ನಾಳ್ ರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ.

ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ.

ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ.

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ.

ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ.

ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ.
ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ.

ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ.

ರಾಜಕೀಯ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ (JDS) ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ

[ccc_my_favorite_select_button post_id="105115"]
2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ

[ccc_my_favorite_select_button post_id="105102"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
ದೊಡ್ಡಬಳ್ಳಾಪುರ: ಪಿಯುಸಿ ಪರೀಕ್ಷೆಯಲ್ಲಿ ಅನ್ನುತ್ತೀರ್ಣ.. ವಿದ್ಯಾರ್ಥಿನಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಪಿಯುಸಿ ಪರೀಕ್ಷೆಯಲ್ಲಿ ಅನ್ನುತ್ತೀರ್ಣ.. ವಿದ್ಯಾರ್ಥಿನಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ‘ದ್ವಿತೀಯ ಪಿಯುಸಿ (PUC) ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಬೇಸರಗೊಂಡಿದ್ದರು’ ಎನ್ನಲಾದ ರೂಪಾಶ್ರೀ (18) ಎಂಬುವವರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಳೆ ಕೋಟೆ ಮೂಲದ ಗಡ್ಡಂಬಚ್ಚಹಳ್ಳಿ ನಿವಾಸಿ ರೂಪಶ್ರೀ ನಗರದ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿ, ಪರೀಕ್ಷೆ ಬರೆದಿದ್ದರು. ಆದರೆ ಮಂಗಳವಾರ ಬಿಡುಗಡೆ

[ccc_my_favorite_select_button post_id="105129"]
ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಕಾರಣ ಮಿನಿಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಬಸ್ ಡ್ರೈವರ್ ಕಾಲು ಮುರಿದಿದೆ. Accident

[ccc_my_favorite_select_button post_id="105131"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!