Site icon Harithalekhani

ಆ ಜೀ ಈ ಜೀಗಳ ಮಾತು ಕೇಳಿ ಯತ್ನಾಳ್ ರಾಜಕೀಯ ಜೀವನ ಹಾಳು; ಕಾಂಗ್ರೆಸ್ ಟ್ವಿಟ್

Yatnal's political life will be ruined after listening to these jis

Yatnal's political life will be ruined after listening to these jis

ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪದಲ್ಲಿ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basana Gouda Patila Yatnal) ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲಾಗಿದೆ.

ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಯತ್ನಾಳ ಶಿಸ್ತು ಉಲ್ಲಂಘಿಸುತ್ತಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ಸಂಬಂಧ ಅವರಿಗೆ ಫೆಬ್ರುವರಿ 10ರಂದು ಶೋಕಾಸ್ ನೋಟಿಸ್‌ ಜಾರಿ ಮಾಡಲಾಗಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಸತ್ಯವಂತರಿಗಿದು ಕಾಲವಲ್ಲ
ದುಷ್ಟ ಜನರಿಗೆ ಸುಭಿಕ್ಷಕಾಲ ಎಂದಿದ್ದಾರೆ.

ಇನ್ನೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆ ಕುರಿತು ಕಾಂಗ್ರೆಸ್ ಟ್ವಿಟ್ ಮಾಡಿ ಅಚ್ಚರಿ ಮೂಡಿಸಿದೆ.

ಕಾಂಗ್ರೆಸ್ ಟ್ವಿಟ್

ಈಗ ‘ಸಂತೋಷ’ ವಾಯಿತೇ?
ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್!

ಎಂದಿರುವ ಕಾಂಗ್ರೆಸ್ ಪರೋಕ್ಷವಾಗಿ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜೀ ಅವರ ಮಾತು ಕೇಳಿದ ಕಾರಣ ಯತ್ನಾಳ್ ಅವರಿಗೆ ಈ ಪರಿಸ್ಥಿತಿ ಎದುರಾಯಿತು ಎಂದು ಮಾರ್ಮಿಕವಾಗಿ ನುಡಿದಿದೆ.

Exit mobile version