Increase in milk price; R. Ashoka said that BJP will fight

ಹಾಲಿನ ದರ ಏರಿಕೆ; ಬಿಜೆಪಿಯಿಂದ ಹೋರಾಟವೆಂದ ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್‌ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್‌ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಪ್ರಶ್ನೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್‌ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು. ಆದರೆ ಬಜೆಟ್‌ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ.

ಬಜೆಟ್‌ ನಂತರ ಎಲ್ಲ ಮಾಧ್ಯಮಗಳಲ್ಲಿ ಶಹಭಾಸ್‌ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ. ಮೋಸ ಮಾಡುವುದರಲ್ಲಿ ಸಿದ್ದರಾಮಯ್ಯ ನಂ.1 ಆಗಿದ್ದಾರೆ. ಧೈರ್ಯ ಇದ್ದಿದ್ದರೆ ತೆರಿಗೆ ಹೆಚ್ಚಳ ಕುರಿತು ಬಜೆಟ್‌ನಲ್ಲೇ ಘೋಷಿಸಬೇಕಿತ್ತು ಎಂದರು.

ಇಡೀ ಆರ್ಥಿಕತೆ ವಿದ್ಯುತ್‌ ಹಾಗೂ ಪೆಟ್ರೋಲ್‌ ಮೇಲೆ ಅವಲಂಬಿತವಾಗಿದೆ. ಇದರ ದರ ಏರಿಕೆಯಾದರೆ ಎಲ್ಲ ವಸ್ತುಗಳ ದರ ಹೆಚ್ಚಾಗುತ್ತದೆ. ಕಾಂಗ್ರೆಸ್‌ ಸರ್ಕಾರ ಕೊಡುವ 2,000 ರೂಪಾಯಿಗಾಗಿ ಜನರು ಬವಣೆ ಅನುಭವಿಸಬೇಕಾಗಿದೆ.

ಗ್ಯಾರಂಟಿ ಅನುಷ್ಠಾನ ಸಮಿತಿ ವೇಸ್ಟ್‌ ಬಾಡಿಯಾಗಿದ್ದು, ಅದರ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅನವಶ್ಯಕವಾಗಿ 150 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಸಮಿತಿ ರದ್ದು ಮಾಡಿದ್ದರೆ ಇಷ್ಟು ಹಣ ಉಳಿಸಬಹುದಿತ್ತು. ಒಂದು ಕಡೆ ಪಕ್ಷಕ್ಕಾಗಿ ತೆರಿಗೆ ಹಣ ಬಳಸಲಾಗುತ್ತಿದೆ. ಮತ್ತೊಂದು ಕಡೆ ಜನರಿಗೆ ಹೊರೆ ಹಾಕಲಾಗುತ್ತಿದೆ ಎಂದು ದೂರಿದರು.

ಯುಗಾದಿ ಹೊಸ ವರ್ಷ ಬರುವ ಸಮಯದಲ್ಲೇ ತೆರಿಗೆ ಹಾಕಲಾಗಿದೆ. ಹಬ್ಬಕ್ಕೆ ಬಳಸುವ ಹಾಲಿಗೂ ದರ ಏರಿಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಸಚಿವ ರಾಜಣ್ಣ ಅವರು ಉಡಾಫೆ ಮಾತಾಡಿದ್ದಾರೆ. ಚುನಾವಣೆಗೆ ಮೊದಲು ಎಲ್ಲವೂ ಫ್ರೀ ಎಂದು ಹೇಳಿ, ನಂತರ ಎಲ್ಲ ದರ ಏರಿಕೆ ಮಾಡಿದ್ದಾರೆ. ಈ 20 ತಿಂಗಳಲ್ಲಿ ಯಾವುದೇ ಜಲಾಶಯದ ಎತ್ತರಿಸಿಲ್ಲ.

ಮೇಕೆದಾಟು ಯೋಜನೆ ಜಾರಿಯಾಗಿಲ್ಲ. ಬೆಂಗಳೂರಿನಲ್ಲಿ ಕಸದ ಮೇಲೆ ಹಸಿರು ಸೆಸ್‌ ಹಾಕಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕಗಳನ್ನು ಹೆಚ್ಚಿಸಲಾಗಿದೆ. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ದುಬಾರಿ ಬೆಂಗಳೂರು ಸೃಷ್ಟಿಯಾಗಿದೆ ಎಂದರು.

ಅಳಿಯ ಅಲ್ಲ ಮಗಳ ಗಂಡ ಎಂಬಂತೆ ಕೋರ್ಟ್‌ ಆದೇಶದಿಂದ ವಿದ್ಯುತ್‌ ದರ ಏರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ನೌಕರರ ಪಿಂಚಣಿಯನ್ನು ಸರ್ಕಾರ ನೀಡುವ ಬದಲು ಜನರೇ ನೀಡಬೇಕಾಗಿದೆ. ಇದರಿಂದಾಗಿ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ. ಜನರು ಇವರನ್ನು ನಂಬಿ ಮತ ನೀಡಿದ್ದರೆ, ಬದುಕು ನರಕ ಮಾಡಿದ್ದಾರೆ ಎಂದರು.

ಬಿಜೆಪಿಯಿಂದ ಹೋರಾಟ

ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಯುಗಾದಿ ಹಬ್ಬದ ಕಳೆದ ನಂತರ ಇದರ ದಿನಾಂಕ ನಿಗದಿ ಮಾಡಲಾಗುವುದು. ಈವರೆಗೆ ಹೆಚ್ಚು ಮಾಡಿದ 9 ರೂ. ನಲ್ಲಿ ಲಾಭವನ್ನು ರೈತರಿಗೆ ನೀಡಿಲ್ಲ. ಪ್ರೋತ್ಸಾಹಧನವನ್ನು ಇನ್ನೂ ಬಾಕಿ ಉಳಿಸಿಕೊಳ್ಳಲಾಗಿದೆ.

ಈಗ ಹೆಚ್ಚು ಮಾಡಿದ ದರದಲ್ಲಿ ಎಷ್ಟು ಸರ್ಕಾರಕ್ಕೆ ಹೋಗಲಿದೆ ಎಂಬುದು ಗೊತ್ತಿಲ್ಲ. ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಪ್ರೋತ್ಸಾಹಧನ ಹೆಚ್ಚಳ ಕುರಿತು ಘೋಷಣೆ ಮಾಡಿತ್ತು. ಅದನ್ನು ಇನ್ನೂ ಜಾರಿ ಮಾಡಿಲ್ಲ ಎಂದರು.

ಬಿಜೆಪಿ ಅವಧಿಯಲ್ಲಿ ಮಾರ್ಗಸೂಚಿ ದರ ಇಳಿಸಲಾಗಿತ್ತು. ಬಸ್‌ ಟಿಕೆಟ್‌ ದರ, ನೀರಿನ ದರ ಏರಿಸಿರಲಿಲ್ಲ. ಹಿಂದಿನ ಯಾವುದೇ ಮುಖ್ಯಮಂತ್ರಿ ಮಾಡದಷ್ಟು ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ. ಅಂದರೆ 65% ನಷ್ಟು ಸಾಲವನ್ನು ಇವರೊಬ್ಬರೇ ಮಾಡಿದ್ದಾರೆ ಎಂದರು.

ಬಿಜೆಪಿಯಲ್ಲಿ ನಾವೆಲ್ಲರೂ ಒಂದಾಗಿ ಹೋಗಬೇಕು ಎಂಬ ಅಭಿಪ್ರಾಯ ನನ್ನದು. ಪಕ್ಷದ ಹಿರಿಯರು ಕೈಗೊಂಡ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಯಾರೂ ಕೂಡ ಪಕ್ಷದ ವಿರುದ್ಧವಾಗಿ ಮಾತಾಡಬಾರದು ಎಂದರು.

ರಾಜಕೀಯ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ (JDS) ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ

[ccc_my_favorite_select_button post_id="105115"]
2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ

[ccc_my_favorite_select_button post_id="105102"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
ಕೃಷ್ಣಬೈರೇಗೌಡರನ್ನು ಸಮರ್ಥ ಮಂತ್ರಿ ಎಂದು ಹಾಡಿ ಹೊಗಳಿದ: ಸಿಎಂ ಸಿದ್ದರಾಮಯ್ಯ

ಕೃಷ್ಣಬೈರೇಗೌಡರನ್ನು ಸಮರ್ಥ ಮಂತ್ರಿ ಎಂದು ಹಾಡಿ ಹೊಗಳಿದ: ಸಿಎಂ ಸಿದ್ದರಾಮಯ್ಯ

ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು. Cmsiddaramaiah

[ccc_my_favorite_select_button post_id="105143"]
ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಕಾರಣ ಮಿನಿಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಬಸ್ ಡ್ರೈವರ್ ಕಾಲು ಮುರಿದಿದೆ. Accident

[ccc_my_favorite_select_button post_id="105131"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!