Portsmouth university keen to open campus in Karnataka

ಕರ್ನಾಟಕದಲ್ಲಿ ಕ್ಯಾಂಪಸ್ ತೆರೆಯಲು ಪೋರ್ಟ್ಸ್ ಮೌತ್ ವಿವಿ ಒಲವು; ಎಂ ಬಿ ಪಾಟೀಲ

ಬೆಂಗಳೂರು: ಕರ್ನಾಟಕದಲ್ಲಿ (Karnataka) ತನ್ನದೇ ಆದ ಕ್ಯಾಂಪಸ್ ಸ್ಥಾಪಿಸಲು ಆಸಕ್ತಿ ಹೊಂದಿರುವ ಬ್ರಿಟನ್ನಿನ ಪ್ರತಿಷ್ಠಿತ ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯದ ಉನ್ನತ ಮಟ್ಟದ ನಿಯೋಗವು ಗುರುವಾರ ಇಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿ ಮಾಡಿ, ಚರ್ಚಿಸಿತು.

ಈ ವೇಳೆ ಸಚಿವರು, `ವಿದೇಶಿ ವಿಶ್ವವಿದ್ಯಾಲಯಗಳು ಸಹಭಾಗಿತ್ವದ ಮೂಲಕ ಅಥವಾ ಸ್ವತಂತ್ರವಾಗಿಯೇ ರಾಜ್ಯದಲ್ಲಿ ತಮ್ಮ ಕ್ಯಾಂಪಸ್ ತೆರೆಯಲು ಮುಂದೆ ಬರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.

ಇದಕ್ಕೆ ಬೇಕಾದ ಭೂಮಿ ಮತ್ತಿತರ ಸೌಲಭ್ಯಗಳನ್ನು ಸರಕಾರವು ನೀಡಲಿದೆ. ಯುಜಿಸಿ ನಿಯಮಾವಳಿಗಳ ಪ್ರಕಾರ, ಜಾಗತಿಕ ಮಟ್ಟದಲ್ಲಿ ಮೊದಲ 500 ಸ್ಥಾನದಲ್ಲಿರುವ ಶಿಕ್ಷಣ ಸಂಸ್ಥೆಗಳು ಭಾರತದಲ್ಲಿ ಎಲ್ಲಿ ಬೇಕಾದರೂ ತಮ್ಮ ಕ್ಯಾಂಪಸ್ ತೆರೆಯಲು ಅವಕಾಶವಿದೆ’ ಎಂದು ನಿಯೋಗಕ್ಕೆ ಮನದಟ್ಟು ಮಾಡಿಕೊಟ್ಟರು.

ಬೆಂಗಳೂರಿಗೆ ಹತ್ತಿರದಲ್ಲೇ ಇರುವ ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ 5,000 ಎಕರೆಗೂ ಹೆಚ್ಚು ವಿಶಾಲವಾದ ಜಾಗದಲ್ಲಿ ಕ್ವಿನ್ ಸಿಟಿ ಅಸ್ತಿತ್ವಕ್ಕೆ ಬರುತ್ತಿದೆ. ಇಲ್ಲಿ ಜ್ಞಾನಕ್ಕೆ ಮೊದಲ ಪ್ರಾಶಸ್ತ್ಯವಿರಲಿದ್ದು, ದೇಶ-ವಿದೇಶಗಳ ಅಗ್ರಮಾನ್ಯ ವಿಶ್ವವಿದ್ಯಾಲಯಗಳ ಕ್ಯಾಂಪಸ್ ಇಲ್ಲಿರುವಂತೆ ನೋಡಿಕೊಳ್ಳಲಾಗುವುದು.

ಇಲ್ಲಿ ಒಟ್ಟು ಯೋಜನೆಗೆ 48 ಸಾವಿರ ಕೋಟಿ ರೂ. ಹೂಡಿಕೆಯಾಗುತ್ತಿದೆ. ಶಿಕ್ಷಣದ ಜತೆಗೆ ಇಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳಿಗೂ ಆದ್ಯತೆ ಇರಲಿದೆ. ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯದ ಸದಸ್ಯರಿಗೆ ಇದನ್ನು ಕೂಡ ವಿವರಿಸಲಾಗಿದೆ. ಇದರ ಭಾಗವಾಗಿ, ಯೋಜನೆಯ ಪ್ರಾತ್ಯಕ್ಷಿಕೆಯನ್ನು ನಿಯೋಗಕ್ಕೆ ತೋರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಚರ್ಚೆಯಲ್ಲಿ ಪಾಲ್ಗೊಂಡಿದ್ದ ಪೋರ್ಟ್ಸ್ ಮೌತ್ ವಿ.ವಿ.ದ ಕುಲಾದಿಪತಿ (ಜಾಗತಿಕ ವಿಭಾಗ) ಪ್ರೊ.ಬಾಬಿ ಮೆಹತಾ, `ಸಹಭಾಗಿತ್ವದ ಮೂಲಕ ರಾಜ್ಯದಲ್ಲಿ ತಮ್ಮ ವಿ.ವಿ.ದ ಕ್ಯಾಂಪಸ್ ಸ್ಥಾಪಿಸಬೇಕೆಂಬುದು ತಮ್ಮ ಆಸಕ್ತಿಯಾಗಿದೆ. ಇದು ಸಾಧ್ಯವಾದರೆ, ರಾಜ್ಯದ ಯುವಜನರಿಗೆ ಕೈಗೆಟುಕುವ ವೆಚ್ಚದಲ್ಲಿ ಜಾಗತಿಕ ಗುಣಮಟ್ಟದ ಶಿಕ್ಷಣ ದೊರೆಯಲಿದೆ. ಕ್ವಿನ್ ಸಿಟಿ ಪ್ರದೇಶಕ್ಕೂ ಭೇಟಿ ನೀಡಲಾಗುವುದು’ ಎಂದರು.

ನಿಯೋಗದಲ್ಲಿ ಐಎಸ್ಡಿಸಿ ನಿರ್ದೇಶಕ ಸುಬಿ ಕುರಿಯನ್, ಸಹಭಾಗಿತ್ವ ಮುಖ್ಯಸ್ಥ ಶೋನ್ ಬಾಬು, ವ್ಯವಸ್ಥಾಪಕ ಗಗನ್ ಒಬೆರಾಯ್, ಯುಎಸ್ಡಿಸಿ ಹಿರಿಯ ಉಪಾಧ್ಯಕ್ಷ ವಿವೇಕ್ ಭಟ್ಟಾಚಾರ್ಯ, ಜತಿನ್ ಖಂಡೇಲ್ವಾಲ್ ಇದ್ದರು.

ರಾಜಕೀಯ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ (JDS) ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ

[ccc_my_favorite_select_button post_id="105115"]
2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ

[ccc_my_favorite_select_button post_id="105102"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
ದೊಡ್ಡಬಳ್ಳಾಪುರ: ಪಿಯುಸಿ ಪರೀಕ್ಷೆಯಲ್ಲಿ ಅನ್ನುತ್ತೀರ್ಣ.. ವಿದ್ಯಾರ್ಥಿನಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಪಿಯುಸಿ ಪರೀಕ್ಷೆಯಲ್ಲಿ ಅನ್ನುತ್ತೀರ್ಣ.. ವಿದ್ಯಾರ್ಥಿನಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ‘ದ್ವಿತೀಯ ಪಿಯುಸಿ (PUC) ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಬೇಸರಗೊಂಡಿದ್ದರು’ ಎನ್ನಲಾದ ರೂಪಾಶ್ರೀ (18) ಎಂಬುವವರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಳೆ ಕೋಟೆ ಮೂಲದ ಗಡ್ಡಂಬಚ್ಚಹಳ್ಳಿ ನಿವಾಸಿ ರೂಪಶ್ರೀ ನಗರದ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿ, ಪರೀಕ್ಷೆ ಬರೆದಿದ್ದರು. ಆದರೆ ಮಂಗಳವಾರ ಬಿಡುಗಡೆ

[ccc_my_favorite_select_button post_id="105129"]
ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಕಾರಣ ಮಿನಿಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಬಸ್ ಡ್ರೈವರ್ ಕಾಲು ಮುರಿದಿದೆ. Accident

[ccc_my_favorite_select_button post_id="105131"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!