ದೊಡ್ಡಬಳ್ಳಾಪುರ (Doddaballapura): ಅಗ್ನಿವಂಶ ಕ್ಷತ್ರಿಯ ತಿಗಳ ಜನಾಂಗದ ಮೂಲ ದೇವರಾದ ಶ್ರೀ ಅಗ್ನಿ ಬನ್ನಿರಾಯ ಸ್ವಾಮಿ 5ನೇ ವರ್ಷದ ಜಯಂತೋತ್ಸವನ್ನು ದೊಡ್ಡಬೆಳವಂಗಲ ಹೋಬಳಿ ರಾಂಪುರ ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಶ್ರೀ ಅಗ್ನಿ ಬನ್ನಿರಾಯ ಸ್ವಾಮಿಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ಹೂವಿನ ಆರತಿಗಳೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು.
ಈ ವೇಳೆ ಗ್ರಾಮದ ಯಜಮಾನ್ರು, ‘ಆಣೆಕಾರರು’, ಮುದ್ರೆ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಊರಿನ ಹಿರಿಯ ಮುಖಂಡರು ಪಾಲ್ಗೊಂಡಿದ್ದರು