ದೊಡ್ಡಬಳ್ಳಾಪುರ (Doddaballapura): ಎರಡು ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಕೌಟುಂಬಿಕ ಕಲಹ
ಮಡದಿಯೊಂದಿಗಿನ ಕೌಟುಂಬಿಕ ಕಲಹಕ್ಕೆ ಬೇಸತ್ತಿರುವ ವ್ಯಕ್ತಿಯೋರ್ವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ವರದನಹಳ್ಳಿಯಲ್ಲಿ ನಡೆದಿದೆ.
ಮೃತನನ್ನು 48 ವರ್ಷದ ಆನಂದ್ ಎಂದು ಗುರುತಿಸಲಾಗಿದೆ.
ತಾಯಿಯ ಅಗಲಿಕೆ ನೋವು.. ಮಗ ಆತ್ಮಹತ್ಯೆ
ಮತ್ತೊಂದು ಪ್ರಕರಣದಲ್ಲಿ ತಾಯಿಯ ಅಗಲಿಕೆಯಿಂದ ಬೇಸತ್ತಿರುವ ಯುವಕ ನೋರ್ವ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಟಿಬಿ ನಾರಾಯಣಪ್ಪ ಬಡಾವಣೆಯಲ್ಲಿ ವರದಿಯಾಗಿದೆ.
ಮೃತನನ್ನು ಕೊನಘಟ್ಟ ನಿವಾಸಿ ರಕ್ಷಿತ್ ಬಾಬು (25 ವರ್ಷ) ಎಂದು ಗುರುತಿಸಲಾಗಿದೆ.
ಮೃತನ ತಾಯಿ ಕೆಲ ದಿನಗಳ ಹಿಂದೆ ನಿಧನರಾಗಿದ್ದು, ಇದರಿಂದ ಡಿಪ್ರೆಷನ್‌ಗೆ ಒಳಗಾಗಿದ್ದ ರಕ್ಷಿತ್ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ